ಸೋಮವಾರ, ನವೆಂಬರ್ 18, 2019
28 °C

ಶಾಸಕ ಸುರೇಶ್‌ಬಾಬು ರಾಜೀನಾಮೆ

Published:
Updated:

ಕಂಪ್ಲಿ (ಬಳ್ಳಾರಿ ಜಿಲ್ಲೆ):  ಶಾಸಕ ಸ್ಥಾನದ ಜೊತೆಗೆ ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೂ ರಾಜೀನಾಮೆ ನೀಡಿರುವುದಾಗಿ ಕಂಪ್ಲಿ ವಿಧಾನಸಭಾ ಕ್ಷೇತ್ರದ  ಶಾಸಕ ಟಿ.ಎಚ್. ಸುರೇಶ್‌ಬಾಬು ಶನಿವಾರ ಪ್ರಕಟಿಸಿದರು.`ಶಾಸಕ ಸ್ಥಾನಕ್ಕೆ ರಾಜೀನಾಮೆ ಪತ್ರವನ್ನು ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಸ್ಪೀಕರ್ ಬೋಪಯ್ಯ ಅವರಿಗೆ ಮತ್ತು ಬಿಜೆಪಿ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಪತ್ರವನ್ನು ಪಕ್ಷದ ರಾಜ್ಯ ಘಟಕದ ಅಧ್ಯಕ್ಷ ಪ್ರಹ್ಲಾದ ಜೋಶಿ ಅವರಿಗೆ ಫ್ಯಾಕ್ಸ್ ಮೂಲಕ ಶನಿವಾರ ರವಾನಿಸಿದ್ದೇನೆ. ಬಿಎಸ್‌ಆರ್ ಕಾಂಗ್ರೆಸ್ ಪಕ್ಷದಿಂದ ವಿಧಾನಸಭೆಗೆ ಸ್ಪರ್ಧಿಸುವೆ' ಎಂದು ಸುರೇಶ್‌ಬಾಬು ಸುದ್ದಿಗಾರರಿಗೆ  ತಿಳಿಸಿದರು.

ಪ್ರತಿಕ್ರಿಯಿಸಿ (+)