ಶಾಸಕ ಸೋಮಲಿಂಗಪ್ಪ ವಿರುದ್ಧ ತನಿಖೆಗೆ ಆದೇಶ

7

ಶಾಸಕ ಸೋಮಲಿಂಗಪ್ಪ ವಿರುದ್ಧ ತನಿಖೆಗೆ ಆದೇಶ

Published:
Updated:

ಬೆಂಗಳೂರು: ಆದಾಯಕ್ಕಿಂತ ಹೆಚ್ಚಿಗೆ ಆಸ್ತಿ ಸಂಪಾದನೆ ಹಾಗೂ ಸರ್ಕಾರಿ ಜಮೀನು ಕಬಳಿಕೆ ಆರೋಪ ಹೊತ್ತ ಬಳ್ಳಾರಿ ಜಿಲ್ಲೆ ಸಿರಗುಪ್ಪದ ಬಿಜೆಪಿ ಶಾಸಕ ಎಂ.ಎಸ್.ಸೋಮಲಿಂಗಪ್ಪ ಅವರ ವಿರುದ್ಧ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲು ಮಾಡಿ ತನಿಖೆ ನಡೆಸುವಂತೆ ಲೋಕಾಯುಕ್ತ ವಿಶೇಷ ಕೋರ್ಟ್ ಸೋಮವಾರ ಆದೇಶಿಸಿದೆ.ಸಿರಗುಪ್ಪದ ನಿವಾಸಿ ಈರಣ್ಣ ಎನ್ನುವವರು ದಾಖಲು ಮಾಡಿರುವ ದೂರಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶ ಎನ್.ಕೆ.ಸುಧೀಂದ್ರ ರಾವ್ ಈ ಆದೇಶ ಹೊರಡಿಸಿದ್ದಾರೆ.ತನಿಖಾ ವರದಿಯನ್ನು ಮಾರ್ಚ್ 12ರ ಒಳಗೆ ನೀಡುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶಿಸಲಾಗಿದೆ.`ಸೋಮಲಿಂಗಪ್ಪ ಸುಮಾರು 60 ಎಕರೆ ಸರ್ಕಾರಿ ಜಮೀನನ್ನು ಕಬಳಿಸಿದ್ದಾರೆ. ಇವರ ಒಟ್ಟು ಆದಾಯ ರೂ 13.14 ಲಕ್ಷ. ಆದರೆ 76 ಲಕ್ಷ ರೂಪಾಯಿ ಆಸ್ತಿ ಸಂಪಾದನೆ ಮಾಡಿರುವುದು ಬೆಳಕಿಗೆ ಬಂದಿದೆ. ಈ ಹಿನ್ನೆಲೆಯಲ್ಲಿ ತನಿಖೆ ಅಗತ್ಯ~ ಎಂದಿದ್ದ ದೂರುದಾರರು, ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಇವರ ವಿರುದ್ಧ ಕ್ರಮಕ್ಕೆ ಆದೇಶಿಸುವಂತೆ ಕೋರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry