ಸೋಮವಾರ, ಮಾರ್ಚ್ 8, 2021
19 °C

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಶ್ರೀರಾಮುಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಶ್ರೀರಾಮುಲು

ಬೆಂಗಳೂರು: ಬಳ್ಳಾರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿ­ಸುವ ಉದ್ದೇಶದಿಂದ ಬಿಎಸ್‌ಆರ್‌ ಕಾಂಗ್ರೆಸ್‌ ಪಕ್ಷದ ಸಂಸ್ಥಾಪಕ ಬಿ.ಶ್ರೀರಾಮುಲು ಅವರು ಶಾಸಕ ಸ್ಥಾನಕ್ಕೆ ಬುಧವಾರ ರಾಜೀನಾಮೆ ಸಲ್ಲಿಸಿದ್ದಾರೆ. ವಿಧಾನಸಭೆಯ ಅಧ್ಯಕ್ಷ ಕಾಗೋಡು ತಿಮ್ಮಪ್ಪ ಅವರು ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.ಬುಧವಾರ ವಿಧಾನಸೌಧದಲ್ಲಿನ ಸ್ಪೀಕರ್‌ ಕಚೇರಿಗೆ ತೆರಳಿದ ಶ್ರೀರಾಮುಲು ಅವರು ಬಳ್ಳಾರಿ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದರು, ಶ್ರೀರಾಮುಲು ಅವರ ರಾಜೀನಾಮೆಗೆ ಬಾಹ್ಯ ಒತ್ತಡಗಳು ಕಾರಣವಲ್ಲ ಹಾಗೂ ಅದು ಸ್ವಂತ ನಿರ್ಧಾರ ಎಂಬುದನ್ನು ಖಾತರಿಪಡಿಸಿಕೊಂಡ ಸ್ಪೀಕರ್‌, ರಾಜೀನಾಮೆಯನ್ನು ಅಂಗೀಕರಿಸಿದರು.ಚನ್ನಪಟ್ಟಣ ಶಾಸಕ ಸಿ.ಪಿ.ಯೋಗೇಶ್ವರ್‌ ಅವರು ಸಮಾಜವಾದಿ ಪಕ್ಷ ತೊರೆದು ಕಾಂಗ್ರೆಸ್‌ ಸೇರಿರುವ ಕುರಿತು ಪ್ರತಿಕ್ರಿಯಿಸಿದ ಕಾಗೋಡು ತಿಮ್ಮಪ್ಪ, ‘ಯೋಗೇಶ್ವರ್‌ ಅವರು ಸಮಾಜವಾದಿ ಪಕ್ಷದ ಏಕೈಕ ಶಾಸಕರಾಗಿದ್ದರು. ಅವರು ಇತರೆ ಪಕ್ಷ ಸೇರಿದಾಗ ಪಕ್ಷಾಂತರ ನಿಷೇಧ ಕಾಯ್ದೆ ಅನ್ವಯ ಆಗುವುದಿಲ್ಲ. ಆದ್ದರಿಂದ ಅವರು ರಾಜೀನಾಮೆ ನೀಡುವ ಅಗತ್ಯ ಇಲ್ಲ’ ಎಂದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.