ಮಂಗಳವಾರ, ಮೇ 11, 2021
26 °C

ಶಾಸಕ ಸ್ಥಾನ ದುರ್ಬಳಕೆ: ಸಿ.ಟಿ. ರವಿ ಆರೋಪಮುಕ್ತ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು (ಪಿಟಿಐ): ಶಾಸಕ ಸ್ಥಾನವನ್ನು ದುರ್ಬಳಕೆ ಮಾಡಿಕೊಂಡು ಕಾನೂನುಬಾಹಿರವಾಗಿ ಕರ್ನಾಟಕ ಗೃಹ ಮಂಡಳಿಯಿಂದ ನಿವೇಶನ ಪಡೆದಿದ್ದಾರೆ ಎಂಬ ಆರೋಪದಿಂದ ಶಾಸಕ ಸಿ.ಟಿ. ರವಿ ಅವರನ್ನು ಮುಕ್ತರನ್ನಾಗಿ ಮಾಡಿ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ವರದಿ ಸಲ್ಲಿಸಿದ್ದಾರೆ.

ಇದರೊಂದಿಗೆ ರವಿ ಅವರಿಗೆ ಅವರ ವಿರುದ್ಧ ಹೂಡಲಾಗಿದ್ದ ಮೊಕದ್ದಮೆಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಕ್ಲೀನ್‌ಚಿಟ್ ನೀಡಿದಂತಾಗಿದೆ.  ಆದರೆ ನಿಯಮಾವಳಿಗಳನ್ನು ಉಲ್ಲಂಘಿಸಿ ರವಿ ಅವರ ಪತ್ನಿ ಹೆಸರಿನಲ್ಲಿ ಪಡೆಯಲಾದ ನಿವೇಶನವನ್ನು ರದ್ದುಗೊಳಿಸಬೇಕೆಂದು ಪೊಲೀಸರು ವರದಿಯಲ್ಲಿ ಹೇಳಿದ್ದಾರೆ.

ನಿವೇಶನ ಪಡೆಯುವ ಹಂತದಲ್ಲಿ ಶಾಸಕ ಸ್ಥಾನವನ್ನು ರವಿ ಅವರು ದುರ್ಬಳಕೆ ಮಾಡಿಕೊಂಡಿರುವುದಕ್ಕೆ ಯಾವುದೇ ಸಾಕ್ಷಾಧ್ಯಾರಗಳು ಲಭಿಸಿಲ್ಲ ಎಂದು ಪೊಲೀಸರು ತಮ್ಮ ವರದಿಯಲ್ಲಿ ತಿಳಿಸಿದ್ದಾರೆ.ಇದೇ ಪ್ರಕರಣದಲ್ಲಿ ಕರ್ನಾಟಕ ಗೃಹ ಮಂಡಳಿ ಮಾಜಿ ಆಯುಕ್ತ ಲಕ್ಷ್ಮಿನಾರಾಯಣ ಹಾಗೂ ಇತರ 7 ಮಂದಿಯ ವಿರುದ್ಧವೂ ಪೊಲೀಸರು ಕ್ಲೀನ್‌ಚೀಟ್ ನೀಡಿದ್ದಾರೆ.ಚಿಕ್ಕಮಗಳೂರಿನ ನಗರಸಭಾ ಸದಸ್ಯ ಆರ್.ದೇವಿಪ್ರಸಾದ್ ಬೆಂಗಳೂರಿನ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ(ಲೋಕಾಯುಕ್ತ) ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದ್ದ ಖಾಸಗಿ ದೂರಿಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ನ್ಯಾಯಾಧೀಶ ಎನ್.ಕೆ. ಸುಧೀಂದ್ರ ರಾವ್ ಅವರು ಕಳೆದ ಡಿಸೆಂಬರ್‌ನಲ್ಲಿ ರವಿ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಲೋಕಾಯುಕ್ತ ಪೊಲೀಸರಿಗೆ ಆದೇಶ ನೀಡಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.