ಶುಕ್ರವಾರ, ಜೂನ್ 25, 2021
29 °C

ಶಾಸಕ ಹರೀಶ್ ವಿರುದ್ಧ ಶಿಸ್ತು ಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೇಲೂರು:  ನಾಯಕತ್ವದ ಬಗ್ಗೆ ಸಲ್ಲದ ಹೇಳಿಕೆ ನೀಡಿದ ಶಾಸಕ ಬಿ.ಪಿ. ಹರೀಶ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.ಶುಕ್ರವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಇದನ್ನೇ ಹೇಳಿದ್ದಾರೆ. ಬಿಜೆಪಿ ಅಧ್ಯಕ್ಷ ಸ್ಥಾನ ಬಿ.ಎಸ್. ಯಡಿಯೂರಪ್ಪ ಅವರಿಗೆ ನೀಡಲಾಗುವುದು ಎಂಬುದು ಕೇವಲ ಊಹಾಪೋಹ ಎಂದರು.ಪೊಲೀಸ್ ಪ್ರತಿಭಟನೆ ಸರಿಯಲ್ಲ: ರಾಜ್ಯದಾದ್ಯಂತ ಪೊಲೀಸರು ಕಪ್ಪು ಪಟ್ಟಿ ಧರಿಸಿ ಶುಕ್ರವಾರ ಪ್ರತಿಭಟನೆ ಮಾಡಿರುವುದು ಸರಿಯಲ್ಲ. ಈ ವಿಚಾರವಾಗಿ ಗೃಹ ಸಚಿವರು ಮತ್ತು ಪೊಲೀಸ್ ಮಹಾ ನಿರ್ದೇಶಕರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಬಗೆಹರಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಹೇಳಿದರು.

ಹೆಲಿಪ್ಯಾಡಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಮಾಧ್ಯಮದವರು, ವಕೀಲರು ಮತ್ತು ಪೊಲೀಸರ ನಡುವಿನ ಸಂಘರ್ಷಕ್ಕೆ ಶಾಂತಿಯುತ ಪರಿಹಾರ ಕಂಡುಕೊಳ್ಳಲಾಗುವುದು.ಈಗಾಗಲೇ ಮಾಧ್ಯಮದವರು, ಪೊಲೀಸರು ಮತ್ತು ವಕೀಲರೊಂದಿಗೆ ಪ್ರತ್ಯೇಕವಾಗಿ ಮಾತುಕತೆ ನಡೆಸಲಾಗಿದೆ. ಈ ಮೂರು ಸಂಸ್ಥೆಯವರು ಸಾಮರಸ್ಯದಿಂದ ಕೆಲಸ ಮಾಡಬೇಕು. ಇವರ ನಡುವಿನ ಎಲ್ಲ ಗೊಂದಲ ಬಗೆಹರಿಸಲು ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.