ಮಂಗಳವಾರ, ಜೂನ್ 22, 2021
27 °C

ಶಾಸನ ರೂಪಿಸಲು ಆಗ್ರಹಿಸಿ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ದಲಿತರ ಅಭಿವೃದ್ಧಿಗಾಗಿ ರೂಪಿಸಿರುವ ಯೋಜನೆಗಳ ಅನುಷ್ಠಾನಕ್ಕಾಗಿ ಶಾಸನ ರೂಪಿಸಬೇಕು ಎಂದು ಆಗ್ರಹಿಸಿ ಸಿಪಿಎಂ ತಾಲ್ಲೂಕು ಸಮಿತಿ ಕಾರ್ಯಕರ್ತರು ನಗರದಲ್ಲಿ ಬುಧವಾರ ತಹಸೀಲ್ದಾರ್ ಕಚೇರಿ ಮುಂದೆ ಧರಣಿ ನಡೆಸಿದರು.ದಲಿತರ ಏಳಿಗೆಗಾಗಿ ರೂಪಿಸಿರುವ ವಿಶೇಷ ಘಟಕ ಯೋಜನೆ ಸೇರಿದಂತೆ ವಿವಿಧ ಕಾರ್ಯಕ್ರಮಗಳ ತ್ವರಿತ ಗತಿಯ ಅನುಷ್ಠಾನ ಅಗತ್ಯ. ಇದನ್ನು ಸಾಧಿಸಲು ಕೇಂದ್ರ ಶಾಸನ ರೂಪಿಸಿ, ಜಾರಿಗೆ ತರಬೇಕು ಎಂದು ಸಂಘಟನೆಯ ತಾಲ್ಲೂಕು ಕಾರ್ಯದರ್ಶಿ ಸುಂಕಪ್ಪ ಗದಗ ಒತ್ತಾಯಿಸಿದರು.ದಲಿತರ ಜನಸಂಖ್ಯೆಗೆ ಅನುಗುಣವಾಗಿ ಈ ಯೋಜನೆಗಳಿಗೆ ಹಣ ಹಂಚಿಕೆ ಮಾಡಬೇಕು. ದಲಿತರು ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸುವ ಸಲುವಾಗಿ ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಬೇಕು, ದೇವದಾಸಿ ಮಹಿಳೆಯರಿಗೆ ನೀಡುವ ಮಾಸಿಕ ವೇತನವನ್ನು ಸಾವಿರ ರೂಪಾಯಿಗೆ ಹೆಚ್ಚಿಸಬೇಕು ಎಂಬುದು ಸೇರಿದಂತೆ ಒಟ್ಟು 13 ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ತಹಸೀಲ್ದಾರರಿಗೆ ಸಲ್ಲಿಸಿದರು.ಸಂಘಟನೆಯ ತಾಲ್ಲೂಕು ಕಾರ್ಯದರ್ಶಿ ಸುಂಕಪ್ಪ ಗದಗ, ಎಸ್‌ಎಫ್‌ಐ ಜಿಲ್ಲಾ ಅಧ್ಯಕ್ಷ ಗುರುರಾಜ ದೇಸಾಯಿ, ಹುಲುಗಪ್ಪ ಗೋಕಾವಿ ಮತ್ತಿತರರು ಪ್ರತಿಭಟನೆ ನೇತೃತ್ವ ವಹಿಸಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.