ಗುರುವಾರ , ಏಪ್ರಿಲ್ 22, 2021
28 °C

ಶಿಕಾರಿಪುರ ಜಿಲ್ಲೆ ರಚಿಸುವ ಪ್ರಸ್ತಾವ ಇಲ್ಲ: ಈಶ್ವರಪ್ಪ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಶಿಕಾರಿಪುರ ಜಿಲ್ಲೆ ಮಾಡುವ ಯಾವುದೇ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ ಎಂದು ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದರು.

ನಗರದಲ್ಲಿ ಭಾನುವಾರ ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತಂತೆ ಯಾವುದೇ ಚರ್ಚೆ ಆಗಿಲ್ಲ. ಆಗಸ್ಟ್ 15ಕ್ಕೆ ಘೋಷಣೆ ಮಾಡುವ ಪ್ರಸ್ತಾವವೂ ಇಲ್ಲ ಎಂದರು.

ಬರ ಪೀಡಿತ ಪ್ರದೇಶ ಪಟ್ಟಿಗೆ ಮತ್ತೆ 7 ತಾಲ್ಲೂಕುಗಳನ್ನು ಸೇರಿಸಲಾಗಿದೆ. ಈ ಮೊದಲು 123 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು. ಎರಡನೇ ಹಂತದಲ್ಲಿ 19 ತಾಲ್ಲೂಕುಗಳನ್ನು ಘೋಷಿಸಿದ್ದು, ಇದೀಗ ಸಾಗರ, ಸೊರಬ, ಜೋಯಿಡಾ, ಹಳಿಯಾಳ, ಮುಂಡಗೋಡು, ಬೆಳಗಾವಿ ಹಾಗೂ ಖಾನಾಪುರ ತಾಲ್ಲೂಕುಗಳನ್ನು ಸೇರಿಸಲಾಗಿದೆ. ಒಟ್ಟಾರೆ 149 ತಾಲ್ಲೂಕುಗಳು ಬರ ಪೀಡಿತ ಪ್ರದೇಶ ಪಟ್ಟಿಗೆ ಸೇರ್ಪಡೆಯಾಗಿವೆ ಎಂದರು.

ಇತ್ತೀಚೆಗೆ ಬರ ಅಧ್ಯಯನಕ್ಕೆ ರಾಜ್ಯಕ್ಕೆ ಆಗಮಿಸಿದ್ದ ಕೇಂದ್ರ ಸಚಿವರಾದ ಶರದ್ ಪವಾರ್ ಹಾಗೂ ಜೈರಾಮ್ ರಮೇಶ್ ಅವರು ರಾಜ್ಯದ ಬೇಡಿಕೆಗಳನ್ನು ಈಡೇರಿಸಿಲ್ಲ. ಇದರಿಂದ ರಾಜ್ಯಕ್ಕೆ ನಿರಾಸೆಯಾಗಿದೆ. ಕೇಂದ್ರ ಸರ್ಕಾರದಿಂದ ಹೆಚ್ಚಿನ ನೆರವು ಕೋರುವ ಸಂಬಂಧ ಮುಖ್ಯಮಂತ್ರಿ ಬುಧವಾರ ಎಲ್ಲ ಮುಖಂಡರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ಹೇಳಿದರು.

ಇನ್ನೊಂದು ವಾರದಲ್ಲಿ ಸಚಿವರ ಖಾತೆಗಳ ಮರು ಹಂಚಿಕೆ ಆಗಲಿದೆ. ಈ ಕುರಿತು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ನಿರ್ಧಾರ ಕೈಗೊಳ್ಳುವರು ಎಂದು ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.