ಶಿಕ್ಷಕರನ್ನು ಸದಾ ಕಾಲ ಗೌರವದಿಂದ ಕಾಣಬೇಕು

7

ಶಿಕ್ಷಕರನ್ನು ಸದಾ ಕಾಲ ಗೌರವದಿಂದ ಕಾಣಬೇಕು

Published:
Updated:

ಮಹದೇವಪುರ: `ಮಕ್ಕಳ ಭವಿಷ್ಯಕ್ಕೆ ಭದ್ರ ಬುನಾದಿ ಹಾಕುವ ಶಿಕ್ಷಕರನ್ನು ಸರ್ವರೂ ಸದಾಕಾಲ ಗೌರವದಿಂದ ಕಾಣಬೇಕು~ ಎಂದು ಕೆಪಿಸಿಸಿ ಕಾರ್ಯದರ್ಶಿ ಎ.ಸಿ. ಶ್ರೀನಿವಾಸ್ ಸಲಹೆ ಮಾಡಿದರು.ಡಾ.ಬಿ.ಆರ್.ಅಂಬೇಡ್ಕರ್ ಕ್ಷೇಮಾಭಿವೃದ್ಧಿ ಸೇವಾ ಸಮಿತಿಯು ಭಾನುವಾರ ಕ್ಷೇತ್ರದ ಕಾಡುಗೋಡಿಯ ದಿನ್ನೂರು ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ಬೆಂಗಳೂರು ಪೂರ್ವ ತಾಲ್ಲೂಕಿನ ನಿವೃತ್ತ ಶಿಕ್ಷಕರನ್ನು ಸನ್ಮಾನಿಸಿ ಅವರು ಮಾತನಾಡಿದರು.`ಈ ಹಿಂದೆ ಸರ್ಕಾರಿ ಶಿಕ್ಷಕರಿಗೆ ಇದ್ದಂತಹ ಗೌರವ ಇತ್ತೀಚಿನ ದಿನಗಳಲ್ಲಿ ಕಡಿಮೆಯಾಗುತ್ತಿದೆ. ಶಿಕ್ಷಣ ವ್ಯವಸ್ಥೆ ವ್ಯಾಪಾರೀಕರಣಗೊಂಡಿರುವುದು ಇದಕ್ಕೆ ಮುಖ್ಯ ಕಾರಣ. ಏನೇ ಆದರೂ ಶಿಕ್ಷಕರು ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯನಿರ್ವಹಿಸುತ್ತಿರುವುದು ಅಭಿನಂದನೀಯ~ ಎಂದರು.ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಘಟಕದ ಅಧ್ಯಕ್ಷ ಪಿ.ಕೆ.ಜಯಚಂದ್ರರೆಡ್ಡಿ ಮಾತನಾಡಿ, ಮಕ್ಕಳನ್ನು ದೇಶದ ಉತ್ತಮ ಪ್ರಜೆಗಳನ್ನಾಗಿ ಮಾಡುವ ಶಿಕ್ಷಕರು ದೇಶದ ಆಸ್ತಿ ಎಂದರು. ಕ್ಷೇತ್ರ ಸಮಯನ್ವಯಾಧಿಕಾರಿ ಕೃಷ್ಣಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಎ.ಸಿ.ಹರಿಪ್ರಸಾದ್ ಉಪಸ್ಥಿತರಿದ್ದರು. 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry