ಸೋಮವಾರ, ಮೇ 23, 2022
26 °C

ಶಿಕ್ಷಕರಿಂದ ವಿದ್ಯಾರ್ಥಿಗಳ ಭವಿಷ್ಯ ಉಜ್ವಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನೆಲಮಂಗಲ: ಶಿಕ್ಷಕರು ಆಚಾರ ವಿಚಾರಗಳಲ್ಲಿ ಪರಿಶುದ್ಧರಾಗಿ ಸರಳ ಹಾಗೂ ನಿಸ್ವಾರ್ಥ ಜೀವನ ನಡೆಸುವ ಮೂಲಕ ವಿದ್ಯಾರ್ಥಿಗಳಲ್ಲಿ ಜ್ಞಾನದ ಹಣತೆ ಹಚ್ಚುವಂತಾಗಬೇಕು ಎಂದು ವೈದ್ಯ ಸಂಘದ ಅಧ್ಯಕ್ಷ ಡಾ. ಎಂ.ಜಯಪ್ರಸಾದ್ ಹೇಳಿದರು.ತಾಲ್ಲೂಕಿನ ತ್ಯಾಮಗೊಂಡ್ಲು ಕನ್ನಡ ಕೂಟ ವಿದ್ಯಾ ಸಂಸ್ಥೆಯ ಜ್ಞಾನಧಾಮ ಪ್ರಗತಿಪರ ಪಾಠಶಾಲೆಯಲ್ಲಿ ನಡೆದ ಒಂದು ದಿನದ ಶಿಕ್ಷಕರ ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.ಸಾಹಿತಿ ತ್ಯಾಮಗೊಂಡ್ಲು ಅಂಬರೀಷ್, ನಿವೃತ್ತ ವೈದ್ಯಾಧಿಕಾರಿ ಡಾ. ಜಿ.ಎ.ವೆಂಕಟೇಶಲು ಮಕ್ಕಳ ಮನೋವಿಜ್ಞಾನದ ಬಗ್ಗೆ ತಿಳಿಸಿದರು. ಸಂಸ್ಥೆಯ ಕಾರ್ಯದರ್ಶಿ ಲಕ್ಷ್ಮೀಕಾಂತ್ ಸ್ವಾಗತಿಸಿ, ಆಡಳಿತಾಧಿಕಾರಿ ಅಪರ್ಣ ಸ್ವಾಮಿ ವಂದಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.