ಶನಿವಾರ, ಮೇ 8, 2021
26 °C

ಶಿಕ್ಷಕರು ಮಕ್ಕಳಿಗೆ ಮೌಲ್ಯ ಕಲಿಸಬೇಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಲಹಂಕ: ಮಕ್ಕಳು ಉತ್ತಮ ಪ್ರಜೆಗಳಾದಾಗ ಮಾತ್ರ ದೇಶದಲ್ಲಿ ತಾಂಡವವಾಡುತ್ತಿರುವ ಭ್ರಷ್ಟಾಚಾರವನ್ನು ಮಟ್ಟಹಾಕಲು ಸಾಧ್ಯ ಎಂದು ಶಾಸಕ ಕೃಷ್ಣ ಬೈರೇಗೌಡ ಅಭಿಪ್ರಾಯಪಟ್ಟರು. ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಸೊಣ್ಣಪ್ಪನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳಿಗೆ ಸರ್ಕಾರದಿಂದ ಮಂಜೂರಾಗಿದ್ದ ಬೈಸಿಕಲ್ ವಿತರಿಸಿ ಅವರು ಮಾತನಾಡಿದರು.



`ಶಿಕ್ಷಕರು ಮಕ್ಕಳಿಗೆ ಕೇವಲ ಪಾಠ ಹೇಳಿದರೆ ಸಾಲದು. ಮೌಲ್ಯಗಳನ್ನು ಹೇಳಿಕೊಡುವ ಮೂಲಕ ಅವರನ್ನು ಗುಣವಂತರು ಹಾಗೂ ಚಾರಿತ್ರ್ಯವಂತರನ್ನಾಗಿ ರೂಪಿಸಬೇಕು~ ಎಂದು ಸಲಹೆ ನೀಡಿದರು.



ಜಿಲ್ಲಾ ಪಂಚಾಯಿತಿ ಸದಸ್ಯೆ ಶುಭಾ ನರಸಿಂಹಮೂರ್ತಿ, ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷೆ ಲಕ್ಷ್ಮಿ ರಮೇಶ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶಕುಂತಲಮ್ಮ, ಸದಸ್ಯರಾದ ಮಧು, ರಮೇಶ್, ಮಾಜಿ ಅಧ್ಯಕ್ಷ ಎಸ್.ಕೆ.ಆಂಜಿನಪ್ಪ, ಮುಖ್ಯ ಶಿಕ್ಷಕ ವೆಂಕಟೇಗೌಡ  ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.