ಭಾನುವಾರ, ಮೇ 9, 2021
26 °C

ಶಿಕ್ಷಕರ ದಿನಾಚರಣೆ: ಆಕರ್ಷಕ ಮೆರವಣಿಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಷ್ಟಗಿ: ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನಾಚರಣೆ ಅಂಗವಾಗಿ ಪಟ್ಟಣದಲ್ಲಿ ಕೊಪ್ಪಳ ಜಿಲ್ಲಾ ಮಟ್ಟದ ~ಶಿಕ್ಷಕರ ದಿನಾಚರಣೆ~ಯನ್ನು ಸೋಮವಾರ ವಿಜೃಂಭಣೆಯಿಂದ ಆಚರಿಸಲಾಯಿತು.ಗುರುಭವನದಿಂದ ರೇಣುಕಾಚಾರ್ಯ ಮಂಗಲ ಭವನದವರೆಗೆ ನಡೆದ ಡಾ.ರಾಧಾಕೃಷ್ಣನ್ ಅವರ ಭಾವಚಿತ್ರದ ಆಕರ್ಷಕ ಮೆರವಣಿಗೆಯಲ್ಲಿ ಜಿಲ್ಲೆ ಮತ್ತು ತಾಲ್ಲೂಕಿನ ಪ್ರಾಥಮಿಕ, ಪ್ರೌಢ, ಕಿರಿಯ ಕಾಲೇಜುಗಳ ನೂರಾರು ಶಿಕ್ಷಕ ಶಿಕ್ಷಕಿಯರು ಪಾಲ್ಗೊಂಡಿದ್ದರು.ಕಲಾ ವಾದ್ಯಮೇಳದೊಂದಿಗೆ ಮೆರವಣಿಗೆಯುದ್ದಕ್ಕೂ ಹೆಜ್ಜೆ ಹಾಕಿದ ಕೆಲ ಶಿಕ್ಷಕರು ತಾಳಕ್ಕೆ ತಕ್ಕಂತೆ ಕುಣಿದು ಕುಪ್ಪಳಿಸುತ್ತಿದ್ದುದು ಕಂಡುಬಂದಿತು.ರೇಣುಕಾಚಾರ್ಯ ಮಂಗಲ ಭವನದಲ್ಲಿ ನಡೆದ ಪ್ರಮುಖ ಸಮಾರಂಭದಲ್ಲಿ ರಾಜ್ಯ ಶಿಕ್ಷಕರ ಕಲ್ಯಾಣ ನಿಧಿ ವತಿಯಿಂದ ಆಯ್ಕೆ ಮಾಡಲಾದ ಜಿಲ್ಲಾ ಮಟ್ಟದ ಅತ್ಯುತ್ತಮ ಶಿಕ್ಷಕರು ಮತ್ತು ಜಿಲ್ಲಾ ಪಂಚಾಯತಿ ಆಯ್ಕೆ ಮಾಡಿದ ಅತ್ಯುತ್ತಮ ಶಿಕ್ಷಕರನ್ನು ಇಲಾಖೆ ಪರವಾಗಿ ಸತ್ಕರಿಸಲಾಯಿತು.ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಕೆ.ಎಚ್.ಕಾಕನೂರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಂಟೆಲಿಂಗಾಚಾರಿ, ಡಯಟ್ ಉಪನಿರ್ದೇಶಕಿ ಸುನಂದಾ ಮೂಗನೂರು, ತಹಶೀಲ್ದಾರ ವೀರೇಶ ಬಿರಾದಾರ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಜಯರಾಮ ಚವ್ಹಾಣ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಚ್.ಗೋನಾಳ, ವಿಶ್ರಾಂತ ಆಂಗ್ಲ ಭಾಷಾ ಉಪನ್ಯಾಸಕ ಬಿ.ಎಸ್.ದುಂಡರೆಡ್ಡಿ ಮತ್ತು ಇತರೆ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ವೇದಿಕೆಯಲ್ಲಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.