ಬುಧವಾರ, ಏಪ್ರಿಲ್ 21, 2021
27 °C

ಶಿಕ್ಷಕರ ನೇಮಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರು, ಶಿಕ್ಷಕರನ್ನು ನೇಮಿಸುವ ಸಂಬಂಧ ಸರ್ಕಾರ ಆದೇಶ ಹೊರಡಿಸಿದೆ.1,764 ಉಪನ್ಯಾಸಕರು ಹಾಗೂ 3,407 ಸಹ ಶಿಕ್ಷಕರ ಕಾಯಂ ಹುದ್ದೆಗಳು ಖಾಲಿ ಇವೆ. ಇದರಿಂದ ಬೋಧನೆಗೆ ತೊಂದರೆಯಾಗಬಾರದು ಎಂಬ ದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಉಪನ್ಯಾಸಕರು ಮತ್ತು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರ ನಿರ್ಧರಿಸಿದೆ.ಅತಿಥಿ ಉಪನ್ಯಾಸಕರಿಗೆ ತಿಂಗಳಿಗೆ ಏಳು ಸಾವಿರ ರೂ ಹಾಗೂ ಸಹಶಿಕ್ಷಕರಿಗೆ ಆರು ಸಾವಿರ ರೂ ಗೌರವಧನ ನೀಡಲಾಗುತ್ತದೆ. ಸಂಬಂಧಪಟ್ಟ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಪ್ರೌಢಶಾಲೆಗಳ ಮುಖ್ಯೋಪಾಧ್ಯಾಯರಿಗೆ, ಉಪನ್ಯಾಸಕರು ಮತ್ತು ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವ ಅಧಿಕಾರ ನೀಡಲಾಗಿದೆ.ಪ್ರಸಕ್ತ ಶೈಕ್ಷಣಿಕ ಸಾಲಿನ ಅಂತ್ಯದವರೆಗೆ ಅಥವಾ ಕಾಯಂ ಶಿಕ್ಷಕರ ನೇಮಕಾತಿ ಆಗುವವರೆಗೆ ಅತಿಥಿ ಶಿಕ್ಷಕರ ಸೇವೆಯನ್ನು ಮುಂದುವರಿಸಲಾಗುತ್ತದೆ. ವೃಂದ ಮತ್ತು ನೇಮಕಾತಿ ನಿಯಮಗಳಲ್ಲಿ ನಿಗದಿಪಡಿಸಿರುವ ವಿದ್ಯಾರ್ಹತೆ ಹೊಂದಿದವರನ್ನು ಮಾತ್ರ ನೇಮಕಾತಿ ಮಾಡಿಕೊಳ್ಳಬೇಕು. ಅವರಿಗೆ ಯಾವುದೇ ರೀತಿಯ ಸೇವಾ ಪ್ರಮಾಣ ಪತ್ರ ನೀಡಬಾರದು.ಶೈಕ್ಷಣಿಕ ವರ್ಷದ ಅಂತ್ಯದಲ್ಲಿ ಸೇವೆಯಿಂದ ಬಿಡುಗಡೆಗೊಳಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ನಿರ್ದೇಶಕರು (ಪ್ರೌಢಶಿಕ್ಷಣ) ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.