ಶಿಕ್ಷಕರ ನೇಮಕದಲ್ಲಿ ಅನ್ಯಾಯ

7

ಶಿಕ್ಷಕರ ನೇಮಕದಲ್ಲಿ ಅನ್ಯಾಯ

Published:
Updated:

ಕರ್ನಾಟಕ ಲೋಕಸೇವಾ ಆಯೋಗ ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ 629 ಮುಖ್ಯೋಪಾಧ್ಯಾಯರ ಹುದ್ದೆಗಳಿಗೆ ಮುಖ್ಯ ಪರೀಕ್ಷೆ ನಡೆಸಿ,1:5 ರ ಪ್ರಮಾಣದಲ್ಲಿ ವ್ಯಕ್ತಿತ್ವ ಪರೀಕ್ಷೆ ನಡೆಸಿ, ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಸಹ ಪ್ರಕಟಿಸಿದೆ. ಆದರೆ ಈ ಪಟ್ಟಿಯಲ್ಲಿ ವ್ಯಕ್ತಿತ್ವ ಪರೀಕ್ಷೆಯಲ್ಲಿ (ಸಂದರ್ಶನ)  ಕನಿಷ್ಠ 150 ಕ್ಕಿಂತ ಕಡಿಮೆ ಅಂಕ ಪಡೆದ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಂಡು150ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ಅಭ್ಯರ್ಥಿಗಳಿಗೆ ಅನ್ಯಾಯಮಾಡಿದಂತಾಗಿದೆ. ಈ ತಾತ್ಕಾಲಿಕ ಪಟ್ಟಿಯಲ್ಲಿ 2006ರ  558 ಪ್ರೌಢಶಾಲಾ ಮುಖ್ಯಶಿಕ್ಷಕರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ತಾತ್ಕಾಲಿಕ ಪಟ್ಟಿಯಲ್ಲಿ ಸೇರಿದ್ದಾರೆಂಬುದು ಗೊತ್ತಾಗಿದೆ.

ಅಂತಹವರನ್ನು ಈ ಪಟ್ಟಿಯಿಂದ ಕೈ ಬಿಡಬೇಕು. ಅನ್ಯಾಯವಾಗಿರುವ ಮತ್ತು ವ್ಯಕ್ತಿತ್ವ ಪರೀಕ್ಷೆಯಲ್ಲಿ ಗರಿಷ್ಟ 150 ಅಂಕಗಳನ್ನು ಪಡೆದ ಅರ್ಹ ಅಭ್ಯರ್ಥಿಗಳನ್ನು ನೇಮಕ ಮಾಡಿಕೊಂಡು ನ್ಯಾಯ ಒದಗಿಸಿ ಕೊಡಬೇಕಾಗಿ ವಿನಂತಿ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry