ಸೋಮವಾರ, ಜೂನ್ 21, 2021
29 °C

ಶಿಕ್ಷಕರ ಬೇಡಿಕೆಗೆ ಸರ್ಕಾರದ ಸಕಾರಾತ್ಮಕ ಸ್ಪಂದನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕುಶಾಲನಗರ: ರಾಜ್ಯ ಸರ್ಕಾರ ಪ್ರೌಢಶಾಲಾ ಶಿಕ್ಷಕರು ಮತ್ತು ಪಿಯೂ ಕಾಲೇಜಿನ ಉಪನ್ಯಾಸಕರ ಬೇಡಿಕೆಗೆ ಸಕರಾತ್ಮಕವಾಗಿ ಸ್ಪಂದಿಸುವ ಮೂಲಕ ಸಮಸ್ಯೆಗೆ ಸೂಕ್ತ ಪರಿಹಾರ ಕಲ್ಪಿ ಸಲಾಗಿದೆ ಎಂದು ವಿಧಾನ ಪರಿಷತ್ ಸದಸ್ಯರೂ ಆದ ನೈಋತ್ಯ ಶಿಕ್ಷಕ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆದ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದರು.ಇಲ್ಲಿಗೆ ಸಮೀಪದ ಸುಂಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಬುಧವಾರ ಭೇಟಿ ನೀಡಿ ಪ್ರೌಢಶಾಲಾ ಶಿಕ್ಷಕರು ಮತ್ತು ಉಪನ್ಯಾಸಕರೊಂದಿಗೆ ಸಮಾಲೋಚನೆ ನಡೆಸಿದ ಅವರು, ಪ್ರೌಢಶಾಲಾ ಶಿಕ್ಷಕರು ಮತ್ತು ಪಿಯೂ ಕಾಲೇಜಿನ ಉಪನ್ಯಾಸಕರ ವೇತನದಲ್ಲಿ ಉಂಟಾಗಿರುವ ತಾರತಮ್ಯವನ್ನು ಸರ್ಕಾರ 6 ನೇ ವೇತನ ಆಯೋಗದ ಮೂಲಕ ಈ ತಿಂಗಳಿನಲ್ಲಿ ಮಂಡಿಸ ಲಿರುವ ಬಜೆಟ್‌ನಲ್ಲಿ ಸರಿಪಡಿಸಲಿದೆ ಎಂದು ಕಾರ್ಣಿಕ್ ತಿಳಿಸಿದರು.ಜಿ.ಪಂ.ಸದಸ್ಯ ಬಿ.ಬಿ.ಭಾರತೀಶ್, ಕುಶಾಲನಗರ ಎಪಿಎಂಸಿ ಅಧ್ಯಕ್ಷ ಪಿ.ಕೆ.ಶೇಷಪ್ಪ, ಗ್ರಾ.ಪಂ.ಅಧ್ಯಕ್ಷೆ ಬಿ.ಐ. ಭವಾನಿ, ರಾಬಿನ್ ದೇವಯ್ಯ, ರವಿ ಕಾಳಪ್ಪ, ವೈ.ಎಂ. ಕರುಂಬಯ್ಯ, ಸಿ.ಸಿ.ಮಂಜು ನಾಥ್ ಇತರರು ಇದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.