ಸೋಮವಾರ, ಏಪ್ರಿಲ್ 12, 2021
23 °C

ಶಿಕ್ಷಕರ ಸಮಸ್ಯೆ ನಿವಾರಣೆಗೆ ಪ್ರಾಮಾಣಿಕ ಯತ್ನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಾಲೂರು: ಶಿಕ್ಷಕರು ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯ ನಿರ್ವಹಿಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ವೈ.ಎ.ನಾರಾಯಣಸ್ವಾಮಿ ಹೇಳಿದರು.

ಪಟ್ಟಣದ ವಿವೇಕಾನಂದ ವಿದ್ಯಾಸಂಸ್ಥೆಯ ಆವರಣದಲ್ಲಿ ಶನಿವಾರ ತಾಲ್ಲೂಕಿನ ಶಿಕ್ಷಕರ ಸಂಘಗಳ ವತಿಯಿಂದ ನಡೆದ ಅಭಿನಂದನಾ ಸಮಾರಂಭದಲ್ಲಿ ಅವರು ಮಾತನಾಡಿದರು.ರಾಜ್ಯದ ಎಲ್ಲ ಶಿಕ್ಷಕರಿಗೆ ಆರೋಗ್ಯ ವಿಮಾ ಕಾರ್ಡ್ ನೀಡಲು ಸರ್ಕಾರ ಚಿಂತನೆ ನಡೆಸಿದೆ. ತಾಲ್ಲೂಕಿನಲ್ಲಿ ತರಬೇತಿ ಕೇಂದ್ರದ ಕಟ್ಟಡ ನಿರ್ಮಾಣಕ್ಕೆ ರೂ 20 ಲಕ್ಷ ಅನುದಾನ ನೀಡುವುದಾಗಿ ಭರವಸೆ ನೀಡಿದರು.ಡಿಡಿಪಿಐ ಎಸ್.ವಿ.ಪದ್ಮನಾಭ್, ಬಿಇಒ ವೆಂಕಟರಾಮರೆಡ್ಡಿ, ಪುರಸಭಾ ಉಪಾಧ್ಯಕ್ಷೆ ಸಿ.ಪಿ.ನಾಗರಾಜ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಕೆಂಪಣ್ಣ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಮುನಿನಾರಾಯಣ, ಪ್ರಾಚಾರ್ಯ ಫರೂಖಿ, ಮುಖಂಡರಾದ ವೆಂಕಟೇಶಪ್ಪ, ರಾಮಕೃಷ್ಣ, ರಾಮಚಂದ್ರಪ್ಪ, ರಾಮಚಂದ್ರಪ್ಪ, ಸೂರ್ಯನಾರಾಯಣ, ಗೋಕುಲ್ ನಾರಾಯಣಸ್ವಾಮಿ, ಉದಯ್ ಕುಮಾರ್, ಸಿ.ನಾರಾಯಣಸ್ವಾಮಿ, ರಾಮಕೃಷ್ಣಪ್ಪ ಉಪಸ್ಥಿತರಿದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.