ಮಂಗಳವಾರ, ಜುಲೈ 14, 2020
27 °C

ಶಿಕ್ಷಕರ ಸಮಸ್ಯೆ ನಿವಾರಿಸಲು ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿಕ್ಷಕರ ಸಮಸ್ಯೆ ನಿವಾರಿಸಲು ಒತ್ತಾಯ

ಚಳ್ಳಕೆರೆ: ತಾಲ್ಲೂಕಿನ ಚಿಕ್ಕಮಧುರೆ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಇರುವ ಶಿಕ್ಷಕರ ಕೊರತೆ ನೀಗಿಸುವಂತೆ ಒತ್ತಾಯಿಸಿ ಮಂಗಳವಾರ ಶಾಲಾ ಮಕ್ಕಳು ಹಾಗೂ ಪೋಷಕರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಮುಂಭಾಗ ಪ್ರತಿಭಟನೆ ನಡೆಸಿದರು.ಕಚೇರಿ ಅವಧಿಗೆ ಸರಿಯಾಗಿ ಗ್ರಾಮದ ಗ್ರಾಮ ಪಂಚಾಯ್ತಿ ಸದಸ್ಯರು, ಶಾಲಾ ಅಭಿವೃದ್ಧಿ ಸಮಿತಿ ಸದಸ್ಯರು ಸೇರಿದಂತೆ ಶಾಲಾ ಮಕ್ಕಳು ಟ್ರ್ಯಾಕ್ಟರ್‌ಗಳಲ್ಲಿ ಆಗಮಿಸಿ ದಿಕ್ಕಾರ ಕೂಗಿ ಪ್ರತಿಭಟನೆಗೆ ಮುಂದಾದರು.ಕಳೆದ ಮೂರು ವರ್ಷಗಳಿಂದ ಶಿಕ್ಷಕರ ಕೊರತೆ ನೀಗಿಸಲು ಶಿಕ್ಷಣ ಇಲಾಖೆಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನ ಆಗಿಲ್ಲ.130 ಮಕ್ಕಳಿರುವ ಸರ್ಕಾರಿ ಶಾಲೆಗೆ ಕೇವಲ 3 ಜನ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ.

ಕಾಯಂ ಶಿಕ್ಷಕರೊಬ್ಬರು ಸಮಾಜ ಕಲ್ಯಾಣ ಇಲಾಖೆ ವಾರ್ಡನ್ ಆಗಿ ಬೇರೆಡೆಗೆ ನಿಯೋಜನೆ ಆಗಿದ್ದಾರೆ ಇದರಿಂದಾಗಿ ಶಿಕ್ಷಕರ ಸಮಸ್ಯೆ ಕಾಡುತ್ತಿದೆ ಎಂದು ಗ್ರಾಮಸ್ಥರು ಅಸಮಾಧಾನ ವ್ಯಕ್ತಪಡಿಸಿದರು.ಬಿಇಒ ರಾಮಯ್ಯ ರಜೆಗೆ ತೆರಳಿರುವ ಹಿನ್ನೆಲೆಯಲ್ಲಿ ಬಿಆರ್‌ಸಿ ವಿಜಯಕುಮಾರ್ ಹಾಗೂ ಶಿಕ್ಷಣ ಸಂಯೋಜಕ ಮೂರ್ತಪ್ಪ ಪ್ರತಿಭಟನಾ ನಿರತರನ್ನು ಮನವೊಲಿಸಲು ಮಾಡಿದ ಪ್ರಯತ್ನ ವಿಫಲವಾಯಿತು. ತಾಲ್ಲೂಕು ಕೇಂದ್ರಕ್ಕೆ 11 ಕೀ.ಮಿ. ದೂರದಲ್ಲಿರುವ ಗ್ರಾಮದ ಸರ್ಕಾರಿ ಶಾಲೆಯಲ್ಲಿರುವ ಶಿಕ್ಷಕರ ಕೊರತೆ ನೀಗಿಸಲು ಆಗದ ಇಲಾಖೆ ಗಡಿಭಾಗದಲ್ಲಿರುವ ಶಾಲೆಗಳ ಗತಿ ಹೇಗಿರಬಹುದು ಎಂದುಎಸ್‌ಡಿಎಂಸಿ ಅಧ್ಯಕ್ಷೆ ಅನುಸೂಯಮ್ಮ ಆಕ್ರೋಶ ವ್ಯಕ್ತಪಡಿಸಿದರು.ವಿದ್ಯಾರ್ಥಿಗಳು ಮಾತ್ರ ನಮ್ಮೂರ ಶಾಲೆಗೆ ಶಿಕ್ಷಕರು ಬೇಕು ಎಂಬ ನಾಮಫಲಕ ಹಿಡಿದು ಶಿಕ್ಷಣ ಇಲಾಖೆಗೆ ದಿಕ್ಕಾರ ಕೂಗುತ್ತಿರುವುದು ಎದ್ದು ಕಾಣುತ್ತಿತ್ತು. ದೂರವಾಣಿ ಮೂಲಕ ಡಿಡಿಪಿಐ ಮಂಜುನಾಥ್ ಅವರಿಗೆ ಮಾತನಾಡಿದ ಕಚೇರಿ ಅಧಿಕಾರಿಗಳಿಗೆ ಯಾವುದೇ ಸಕಾರಾತ್ಮಕ ಉತ್ತರ ದೊರೆಯಲಿಲ್ಲ.ನಂತರ, ಸೋಮಗುದ್ದು ತಾಲ್ಲೂಕು ಪಂಚಾಯ್ತಿ ಸದಸ್ಯ ತಿಪ್ಪೇಸ್ವಾಮಿ ಸ್ಥಳಕ್ಕೆ ಆಗಮಿಸಿ ಶಿಕ್ಷಣ ಇಲಾಖೆ ಅಧಿಕಾರಿಗಳ ಜತೆ ಚರ್ಚಿಸಿ ತಾತ್ಕಾಲಿಕವಾಗಿ ಶಿಕ್ಷಕರನ್ನು ನಿಯೋಜನೆಗೊಳಿಸಿ. ಮುಂದಿನ ವರ್ಷದವರೆಗೂ ಯಾವುದೇ ತೊಂದರೆ ಆಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು.ಸ್ಥಳದಲ್ಲಿಯೇ ಶಿಕ್ಷಕರೊಬ್ಬರನ್ನು ತಾತ್ಕಾಲಿಕವಾಗಿ ನಿಯೋಜಿಸಿದ ನಂತರವೇ ಗ್ರಾಮಸ್ಥರು ಹಾಗೂ ಮಕ್ಕಳು ಪ್ರತಿಭಟನೆ ಹಿಂದಕ್ಕೆ ಪಡೆದರು.ಈ ಸಂದರ್ಭದಲ್ಲಿ ದುರುಗೇಶಿ, ಸತೀಶ, ಈಶ್ವರಪ್ಪ, ಮಲ್ಲಿಕಾರ್ಜುನ, ಗ್ರಾ.ಪಂ. ಸದಸ್ಯರಾದ ತಿಮ್ಮಣ್ಣ, ಅನ್ನಪೂರ್ಣಮ್ಮ, ತಿಪ್ಪಮ್ಮ ಇದ್ದರು. 

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.