ಬುಧವಾರ, ಮೇ 19, 2021
27 °C

ಶಿಕ್ಷಕರ ಸ್ಥಾನ ರಾಷ್ಟ್ರಪತಿ ಸ್ಥಾನಕ್ಕಿಂತ ದೊಡ್ಡದು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಯಚೂರು: `ಶಿಕ್ಷಕರ ಸ್ಥಾನ ರಾಷ್ಟ್ರಪತಿ ಸ್ಥಾನಕ್ಕಿಂತ ದೊಡ್ಡದು. ಅದರ ಮಹತ್ವವನ್ನು ವಿಶ್ವಕ್ಕೆ ತೋರಿಸಿಕೊಟ್ಟವರು ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರು. ಅಂಥ ಶ್ರೇಷ್ಠ ಮಹನೀಯರು ತೋರಿದ ದಾರಿಯಲ್ಲಿ ಶಿಕ್ಷಕ ಸಮುದಾಯ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಿ ಅವರ ಭವಿಷ್ಯ ಉಜ್ವಲಗೊಳಿಸಬೇಕಾಗಿದೆ~ ಎಂದು ಶಾಸಕ ವೆಂಕಟರಾವ್ ನಾಡಗೌಡ ಹೇಳಿದರು.ಇಲ್ಲಿನ ಪಂಡಿತ ಸಿದ್ಧರಾಮ ಜಂಬಲದಿನ್ನಿ ರಂಗಮಂದಿರದಲ್ಲಿ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯಿತಿ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ನಗರಸಭೆ ಸಂಯುಕ್ತ ಅಶ್ರಯದಲ್ಲಿ ಸೋಮವಾರ ಏರ್ಪಡಿಸಿದ್ಧ ರಾಯಚೂರು ಜಿಲ್ಲಾ ಮತ್ತು ರಾಯಚೂರು ತಾಲ್ಲೂಕು ಶಿಕ್ಷಕರ ದಿನಾಚರಣೆ ಹಾಗೂ ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.ದೇಶ ಕಟ್ಟುವವರು ಎಂಜಿನಿಯರ್, ವೈದ್ಯರಲ್ಲ ಬದಲಿಗೆ ಶಿಕ್ಷಕರು. ಪ್ರಸ್ತುತ ದಿನಗಳಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಬಾಂಧವ್ಯದ ಕೊಂಡಿ ಕಳಚುತ್ತಿರುವುದು ವಿಷಾದನೀಯ. ಈ ಬಗ್ಗೆ ಶಿಕ್ಷಕರು, ಪಾಲಕರು ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ ಎಂದು ಹೇಳಿದರು.ಮತ್ತೊಬ್ಬ ಅತಿಥಿ ಶಾಸಕ ಎನ್. ಶಂಕರಪ್ಪ ಮಾತನಾಡಿದರು.ಶಾಸಕ ಸಯ್ಯದ್ ಯಾಸಿನ್ ಅಧ್ಯಕ್ಷತೆವಹಿಸಿದ್ದರು. ಜಿ.ಪಂ. ಅಧ್ಯಕ್ಷೆ ತನ್ವೀರಾ ಬಷಿರುದ್ದೀನ್ ಉದ್ಘಾಟಿಸಿದರು. ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಅಧ್ಯಕ್ಷ ಶಂಕರಗೌಡ ಹರವಿ, ಜಿಲ್ಲಾಧಿಕಾರಿ ವಿ ಅನ್ಬುಕುಮಾರ, ನಗರಸಭೆ ಅಧ್ಯಕ್ಷೆ ಮಮತಾ ಸುಧಾಕರ, ಉಪಾಧ್ಯಕ್ಷೆ ಕೆ.ಸುಲೋಚನಾ, ನಗರಸಭೆ ಸದಸ್ಯ ಜಯಣ್ಣ, ಆಯುಕ್ತ ತಿಪ್ಪೇಶ, ಡಿಡಿಪಿಐ ಅಮೃತ ಬೆಟ್ಟದ್, ಉಪನ್ಯಾಸಕ ರಮೇಶಬಾಬು ಯಾಳಗಿ ವೇದಿಕೆಯಲ್ಲಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.