ಸೋಮವಾರ, ಮೇ 23, 2022
24 °C

ಶಿಕ್ಷಕರ ಹುದ್ದೆಗಳ ನೇಮಕಕ್ಕೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿವಮೊಗ್ಗ: ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಎನ್‌ಎಸ್‌ಯುಐ ಕುವೆಂಪು ವಿಶ್ವವಿದ್ಯಾಲಯ ಘಟಕದ ಕಾರ್ಯಕರ್ತರು ರಾಜ್ಯ ಘಟಕದ ಅಧ್ಯಕ್ಷ ಮಹೇಶ್ ರಾವಣಿಕರ್ ನೇತೃತ್ವದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.ವರ್ಷದಿಂದ ವರ್ಷಕ್ಕೆ ರಾಜ್ಯದಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಕರ ತರಬೇತಿ ಕೇಂದ್ರಗಳು ಹೆಚ್ಚಾಗುತ್ತಲೇ ಇವೆ. ಇದರಿಂದ ಪ್ರತಿ ಬಾರಿ ಲಕ್ಷಾಂತರ ವಿದ್ಯಾರ್ಥಿಗಳು ತರಬೇತಿ ಮುಗಿಸಿಕೊಂಡು ಹೊರಬರುತ್ತಿದ್ದಾರೆ. ಆದರೆ, ಸರ್ಕಾರ ನೇಮಕಾತಿ ಮಾಡಿಕೊಳ್ಳುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.ಮುಖ್ಯಮಂತ್ರಿಗಳು 2010ರ ಒಳಗೆ ರಾಜ್ಯದಲ್ಲಿ 25 ಸಾವಿರ ಶಿಕ್ಷಕರ ನೇಮಕ ಮಾಡಿಕೊಳ್ಳುವುದಾಗಿ ಘೋಷಿಸಿದ್ದರು. ಆದರೆ, ನೇಮಕಾತಿ ಪ್ರಕ್ರಿಯೆ ಇನ್ನೂ ಆರಂಭಿಸಿಲ್ಲ ಎಂದು ಆರೋಪಿಸಿದರು. ಈ ಸಂಬಂಧ ಅಪರ ಜಿಲ್ಲಾಧಿಕಾರಿ ಶ್ರೀರಂಗಯ್ಯ ಅವರಿಗೆ ಮನವಿ ಸಲ್ಲಿಸಿದರು.ಎನ್‌ಎಸ್‌ಯುಐ ಕುವೆಂಪು ವಿವಿ ಘಟಕದ ಅಧ್ಯಕ್ಷ ಸಿ.ಜಿ. ಮಧುಸೂದನ್, ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎ. ರಮೇಶ್ ಹೆಗ್ಡೆ, ಪದಾಧಿಕಾರಿಗಳಾದ ಕೆ. ದೇವೇಂದ್ರಪ್ಪ, ಚೇತನ್, ಮೋಹನ್ ಮತ್ತಿತರರು ನೇತೃತ್ವ ವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.