ಶಿಕ್ಷಕರ ಹೆಚ್ಚುವರಿ ಹುದ್ದೆ: ಪಟ್ಟಿ ಪ್ರಕಟ

ಮಂಗಳವಾರ, ಜೂಲೈ 23, 2019
20 °C

ಶಿಕ್ಷಕರ ಹೆಚ್ಚುವರಿ ಹುದ್ದೆ: ಪಟ್ಟಿ ಪ್ರಕಟ

Published:
Updated:

ಹೊಸಕೋಟೆ: 2012- 13ನೇ ಸಾಲಿಗೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿನ ಹೆಚ್ಚುವರಿ ಶಿಕ್ಷಕರು ಹಾಗು ಹೆಚ್ಚುವರಿ ಖಾಲಿ ಹುದ್ದೆಗಳನ್ನು ಗುರುತಿಸಿ ಸ್ಥಳಾಂತರಿಸುವ ಸಲುವಾಗಿ ಪಟ್ಟಿಯೊಂದನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.

ಹೆಚ್ಚುವರಿ ಪಟ್ಟಿಗೆ ಆಕ್ಷೇಪಣೆಗಳು ಇದ್ದಲ್ಲಿ ಈ ತಿಂಗಳ 23ರ ಒಳಗೆ ಲಿಖಿತವಾಗಿ ತಿಳಿಸಬೇಕೆಂದು ಸೂಚಿಸಲಾಗಿದೆ.

ಕುಂದುಕೊರತೆ ಸಭೆ: ಬೆಂಗಳೂರು ಗ್ರಾಮಾಂತರ ಜಿಲ್ಲಾ ಲೋಕಾಯುಕ್ತ ಪೊಲೀಸರಿಂದ ಶನಿವಾರ (ಜು. 21) ಬೆಳಿಗ್ಗೆ 11ಕ್ಕೆ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಜನಸಂಪರ್ಕ ಸಭೆಯನ್ನು ಏರ್ಪಡಿಸಲಾಗಿದೆ. ಸಾರ್ವಜನಿಕರು ಸಭೆಯಲ್ಲಿ ಭಾಗವಹಿಸಿ ತಮ್ಮ ಕುಂದು ಕೊರೆತೆಗಳನ್ನು ತಿಳಿಸಬಹುದಾಗಿದೆ ಎಂದು ಹೊಸಕೋಟೆ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry