ಮಂಗಳವಾರ, ಮೇ 18, 2021
30 °C

ಶಿಕ್ಷಣಕ್ಕೂ ಆದ್ಯತೆ ನೀಡಿ: ಒಕ್ಕಲಿಗರಿಗೆ ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊರಟಗೆರೆ: ಒಕ್ಕಲಿಗ ಜನಾಂಗದವರು ದೇಶಕ್ಕೆ ಅನ್ನ ನೀಡುವ ರೈತ ಸಮುದಾಯ ಎಂದು ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಇಲ್ಲಿ ಶನಿವಾರ ಅಭಿಪ್ರಾಯಪಟ್ಟರು.ಒಕ್ಕಲಿಗ ನೌಕರರ ಕ್ಷೇಮಾಭಿವೃದ್ಧಿ ಸಂಘ ಏರ್ಪಡಿಸಿದ್ದ ಒಕ್ಕಲಿಗರ ಹಬ್ಬದಲ್ಲಿ ಮಾತನಾಡಿ, ಕೃಷಿ ಅವಲಂಬಿತ ರೈತ ಕುಟುಂಬದಲ್ಲಿ ಹುಟ್ಟಿದ ದೇವೇಗೌಡರು ಪ್ರಧಾನಿಯಾಗುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ. ಅದೇ ರೀತಿ ಜನಾಂಗದ ಅನೇಕರು ಅತ್ಯುನ್ನತ ಸ್ಥಾನ ಪಡೆದಿದ್ದಾರೆ. ಆದರೂ ಜನಾಂಗ ಅನೇಕ ರೀತಿಯಲ್ಲಿ ಶೋಷಣೆ, ವಂಚನೆಗೆ ಒಳಗಾಗುತ್ತಿರುವುದು ವಿಷಾದನೀಯ ಎಂದರು.ಸರ್ಕಾರಗಳು ಮುಂದಿನ ಪೀಳಿಗೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಕೃಷಿ, ನೀರಾವರಿಯ ಹೊಸ ಯೋಜನೆ ಜಾರಿಗೊಳಿಸಬೇಕು. ಒಕ್ಕಲಿಗ ಜನಾಂಗ ಕೃಷಿಗೆ ಸೀಮಿತವಾಗದೆ ಶಿಕ್ಷಣ ಕ್ಷೇತ್ರದಲ್ಲೂ ಮುಂದುವರಿಯಬೇಕು ಎಂದು ಹೇಳಿದರು.ನಂಜಾವಧೂತ ಸ್ವಾಮೀಜಿ ಆಶೀರ್ವಚನ ನೀಡಿ, ಒಕ್ಕಲಿಗರು ಕೇವಲ ಒಂದು ಜಾತಿ ಸೂಚಕವಲ್ಲ. ಅದು ಒಂದು ಪರಂಪರೆ. ವ್ಯವಸಾಯ ಮಾಡುವವರೆಲ್ಲರೂ ಒಕ್ಕಲಿಗರು. ಉಪಜಾತಿ ಆಧಾರದ ಮೇಲೆ ಹೊಡೆದು ಹಂಚಿಹೋಗದೆ `ಒಕ್ಕಲಿಗರು~ ಒಂದೇ ಎನ್ನುವ ಮನೋಭಾವ ಬೆಳೆಸಿಕೊಳ್ಳಿ ಎಂದರು.ಒಕ್ಕಲಿಗರ ಸಂಘದ ಜಂಟಿ ಕಾರ್ಯದರ್ಶಿ ಯಲಚವಾಡಿ ನಾಗರಾಜು, ನೌಕರರ ಸಂಘದ ಅಧ್ಯಕ್ಷ ವಿ.ಕೆ.ವೀರಕ್ಯಾತರಾಯ, ಶಿಕ್ಷಕ ಸಂಘದ ಅಧ್ಯಕ್ಷ ಎಸ್.ಕೆ.ನಾಗರಾಜು, ಆಕ್ಸ್‌ಫರ್ಡ್ ವಿದ್ಯಾಸಂಸ್ಥೆಯ ಜಿ.ಆರ್.ಶಿವರಾಮಯ್ಯ ಮಾತನಾಡಿದರು.ಜನಾಂಗದ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸದಸ್ಯರನ್ನು ಸನ್ಮಾನಿಸಿ, ಎಸ್‌ಎಸ್‌ಎಲ್‌ಸಿ, ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.