ಶುಕ್ರವಾರ, ಜೂನ್ 25, 2021
30 °C

ಶಿಕ್ಷಣಕ್ಕೆ ಒತ್ತು ನೀಡಲು ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗಜೇಂದ್ರಗಡ:  ವಿದ್ಯಾರ್ಥಿಗಳು ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿ, ಕಲಿಕಾ ಸಾಮರ್ಥ್ಯವನ್ನು ವೃದ್ದಿಸಿಕೊಂಡು ಉಜ್ವಲ ಭವಿಷ್ಯ ರೂಪಿಸಿಕೊಳ್ಳಲು ಶ್ರಮಿಸಬೇಕು ಎಂದು ನಿವೃತ್ತ ಸಾರ್ವ ಜನಿಕ ಶಿಕ್ಷಣ ಇಲಾಖೆಯ ಉನಿರ್ದೇಶಕ ಬಳ್ಳಾರಿ ಹೇಳಿದರು.ಸಮೀಪದ ಕಾಲಕಾಲೇಶ್ವರ ಗ್ರಾಮದ ಮೂರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತ ನಾಡಿದ ಅವರು, ರೋಣ ತಾಲ್ಲೂಕಿನ ಗ್ರಾಮೀಣ ಮತ್ತು ಪಟ್ಟಣ ಪ್ರದೇಶಗಳ ಮಕ್ಕಳಿಗೆ ಈ ಶಾಲೆ ಉತ್ತಮ ಗುಣ ಮಟ್ಟದ ಶಿಕ್ಷಣ ನೀಡುತ್ತಿರುವುದು ಅಭಿನಂದನೀಯ ಎಂದರು.ಪ್ರಸ್ತುತ ದಿನಗಳಲ್ಲಿ ಮಕ್ಕಳಿಗೆ ಪಠ್ಯದ ಜೊತೆಗೆ ಕ್ರೀಡೆ, ತಂತ್ರಜ್ಞಾನ, ಸಂಸ್ಕೃತಿ, ಸಾಮಾಜಿಕ ಇತ್ಯಾದಿ ರಂಗಗಳ ಕುರಿತಾ ದ ಜ್ಞಾನದ ಅರಿವು ಅಗತ್ಯ. ಈ ನಿಟ್ಟಿನಲ್ಲಿ ಪಾಲಕರು ಹಾಗೂ ಶಿಕ್ಷಕರು ಎಚ್ಚೆತ್ತುಕೊಂಡು ಎಲ್ಲ ರಂಗ ಗಳಿಗೆ ಅನ್ವಯವಾಗುವ ರೀತಿಯಲ್ಲಿ ಶಿಕ್ಷಣ ದೊರಕಿಸುವಲ್ಲಿ ಶ್ರಮಿಸಬೇಕು. ಅಂದಾಗ ಮಾತ್ರ ಮಕ್ಕಳಲ್ಲಿ ಪ್ರಬುದ್ಧತೆ ಬೆಳೆಯಲು ಸಾಧ್ಯ ಎಂದರು.    

ವಿದ್ಯಾರ್ಥಿಗಳು ತಮ್ಮಲಿರುವ ಪ್ರತಿಭೆಯನ್ನು ಪ್ರದರ್ಶಿಸಿದರೆ ಮಾತ್ರ ಸಮಾಜ ಗುರುತಿಸಿ ಸೂಕ್ತ ವೇದಿಕೆ ಕಲ್ಪಿಸಿಕೊಡುತ್ತದೆ.ಓದಿನತ್ತ ಗಮನ ಹರಿಸದೆ, ಕೇವಲ ಮೋಜು, ಮಸ್ತಿ ಮೂಲಕ ಸಮಯ ವ್ಯರ್ಥಗೊಳಿಸಿ, ಏನನ್ನು ಸಾಧಿಸದಿದ್ದರೆ, ಅಂಥ ವ್ಯಕ್ತಿಯನ್ನು ಸಮಾಜ ನೋಡುವ ದೃಷ್ಟಿಕೋನ ಬದಲಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿ ದರು.  ರಾಜೂರ ಗ್ರಾ.ಪಂ ನ ಮಾಜಿ ಉಪಾಧ್ಯಕ್ಷ ಶಶಿಧರ ಹೂಗಾರ ಮಾತನಾಡಿ, ಕಾಲಕಾಲೇಶ್ವರ ಗ್ರಾಮ ದಲ್ಲಿನ ಮೂರಾರ್ಜಿ ವಸತಿ ಶಾಲೆ ಸ್ಥಾಪನೆಗಾಗಿ ಶಾಸಕ ಶ್ರೀಶೈಲಪ್ಪ ಬಿದರೂರ ನೇತೃತ್ವದಲ್ಲಿ ಗ್ರಾಮಸ್ಥ ರೆಲ್ಲರು ಸಾಕಷ್ಟು ಹೋರಾಟ ಮಾಡಿ ದ್ದಾರೆ.ಆ ಹೋರಾಟದ ಫಲವಾಗಿಯೇ ಇಂದು ಕಾಲಕಾಲೇಶ್ವರದಲ್ಲಿ ಶಾಲೆ ಸ್ಥಾಪನೆಯಾಯಿತು. ಇಂಥ ಹೋರಾಟ ಸಾರ್ಥಕತೆ ಪಡೆದುಕೊಳ್ಳಬೇಕಾದರೆ ವಿದ್ಯಾರ್ಥಿಗಳು ಪರಿಶ್ರಮದಿಂದ ಓದಿ ಮಹತ್ತರ ಸಾಧನೆಗಳನ್ನು ಮಾಡಬೇಕು ಎಂದು  ಹೇಳಿದರು.ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಓದಿಗಿಂತಲ್ಲೂ ಕ್ಷಣಿಕ ಸುಖಕ್ಕಾಗಿ ಹಪ ಹಪಿಸುತ್ತಿದ್ದಾರೆ. ದುಶ್ಚಟಗಳ ದಾಸ ರಾಗುತ್ತಿದ್ದಾರೆ ಎಂದು ವಿಷಾದ ವ್ಯಕ್ತಪಡಿಸಿದರು.ಗಜೇಂದ್ರಗಡ ಭಾರತೀಯ ಸ್ಟೇಟ್ ಬ್ಯಾಂಕ್ ವ್ಯವಸ್ಥಾಪಕ ಚಲುವಾದಿ, ರಾಜೂರ ಗ್ರಾ.ಪಂ ಸದಸ್ಯ ಚಿಲ್‌ಝರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.ಇದೇ ಸಂದರ್ಭದಲ್ಲಿ ಕಳೆದ ವರ್ಷ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ನಗದು ಹಾಗೂ ಪುರಸ್ಕಾರ ನೀಡಿ ಗೌರವಿಸಲಾಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.