ಶನಿವಾರ, ಮೇ 15, 2021
24 °C

ಶಿಕ್ಷಣಕ್ಕೆ ಬಡತನ ಅಡ್ಡಿಯಾಗದಿರಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ಉನ್ನತ ಶಿಕ್ಷಣ ವ್ಯಾಸಂಗ ಮಾಡುವ ಆಕಾಂಕ್ಷೆ ಹೊಂದಿರುವ ವಿದ್ಯಾರ್ಥಿಗಳು ಬಡತನದ ಕಾರಣಕ್ಕೆ ವಂಚಿತರಾಗಬಾರದು. ಆದ್ದರಿಂದಲೇ ಪಿಯುಸಿ  ವಿದ್ಯಾರ್ಥಿಗಳಿಗೆ ಉಚಿತ ಸಿಇಟಿ ತರಬೇತಿ ನೀಡಲಾಗುತ್ತಿದೆ ಎಂದು ಕೇಂದ್ರ ಕಂಪೆನಿ ವ್ಯವಹಾರಗಳ ಸಚಿವ ಎಂ.ವೀರಪ್ಪ ಮೊಯಿಲಿ ತಿಳಿಸಿದರು.ನಗರದ ಮಹಾತ್ಮ ಗಾಂಧಿ ವಸತಿ ಪ್ರೌಢಶಾಲೆ ಆವರಣದಲ್ಲಿ ಶುಕ್ರವಾರ ಉಚಿತ ಸಿಇಟಿ ತರಗತಿ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, `ವಿದ್ಯಾಭ್ಯಾಸ ಮತ್ತು ಗುರಿ ಸಾಧನೆಗೆ ಯಾವತ್ತೂ ಬಡತನ ಅಡ್ಡಿಯಾಗಬಾರದು. ಪ್ರತಿಭೆಗೆ ಯಾವುದೇ ರೀತಿಯಲ್ಲೂ ಕುಂದುಂಟಾಗಬಾರದು~ ಎಂದರು.ದೇಶದಲ್ಲಿ ಅಪಾರ ಸಂಖ್ಯೆಯಲ್ಲಿ ಪ್ರತಿಭಾವಂತರಿದ್ದಾರೆ. ಆದರೆ ಸೂಕ್ತ ಮಾಹಿತಿ ಮತ್ತು ಮಾರ್ಗದರ್ಶನ ಇಲ್ಲದ ಕಾರಣ ಅವರ ಪ್ರತಿಭೆ ಬೆಳಕಿಗೆ ಬಂದಿಲ್ಲ. ಉನ್ನತ ಶಿಕ್ಷಣ ವ್ಯಾಸಂಗ ದುಬಾರಿಯಾಗಿರುವ ಕಾರಣದಿಂದಲೇ ಸಿಇಟಿ ಪದ್ಧತಿ ಜಾರಿಗೆ ತರಲಾಗಿದೆ. ಇದರಿಂದ ಹಲವಾರು ಬಡ ಮತ್ತು ಮಧ್ಯಮವರ್ಗದ ವಿದ್ಯಾರ್ಥಿಗಳಿಗೆ ಎಂಜಿನಿಯರಿಂಗ್ ಮತ್ತು ವೈದ್ಯಕೀಯ ಕೋರ್ಸ್ ಕಲಿಯಲು ಸಾಧ್ಯವಾಗಿದೆ~ ಎಂದು ಅವರು ತಿಳಿಸಿದರು.ಕಿಸಾನ್ ಸಭಾ ಟ್ರಸ್ಟ್ ವತಿಯಿಂದ ವಿದ್ಯಾರ್ಥಿಗಳಿಗೆ ಉಚಿತ ಸಿಇಟಿ ತರಬೇತಿ ನೀಡಲಾಗುತ್ತಿದ್ದು, ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಅವರು ಸಲಹೆ ನೀಡಿದರು. ಕೆಲ ಹೊತ್ತು ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಅವರು, ವಿದ್ಯಾಭ್ಯಾಸಕ್ಕೆ ಸಂಬಂಧಿಸಿದಂತೆ ಮಾಹಿತಿ ನೀಡಿದರು.ತಪಸ್ ಲರ್ನಿಂಗ್ ಲಿಮಿಟೆಡ್ ಸಂಸ್ಥೆಯ ನಿರ್ದೇಶಕ ಜಗದೀಶ್ವರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.