ಸೋಮವಾರ, ಜೂನ್ 21, 2021
29 °C

ಶಿಕ್ಷಣದಿಂದಲೇ ಸುಂದರ ಸಮಾಜ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಭಾಲ್ಕಿ: ಓದು ಮತ್ತು ಬರಹಕ್ಕೆ ಮಾತ್ರ ಶಿಕ್ಷಣ ಸೀಮಿತವಾಗದೇ ಅದನ್ನು ಪಡೆದ ಮಕ್ಕಳ ಭವಿಷ್ಯ ಉಜ್ವಲಗೊಳ್ಳಬೇಕು. ಉತ್ತಮ ಶಿಕ್ಷಣ ಪಡೆದವರಿಂದ ಸುಂದರ ಸಮಾಜದ ಸೃಷ್ಟಿಯಾಗಬೇಕು ಎಂದು ಸರ್ಕಾರಿ ಪ.ಪೂ. ಕಾಲೇಜಿನ ಪ್ರಾಚಾರ್ಯ ಬಸವರಾಜ ಸ್ವಾಮಿ ನುಡಿದರು.ಪಟ್ಟಣದ ಸತ್ಯನಿಕೇತನ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ ಈಚೆಗೆ ನಡೆದ ಬೀಳ್ಕೊಡುವ ಸಮಾರಂಭ ಮತ್ತು ಪಾಲಕರ ಸಮಾವೇಶದಲ್ಲಿ ಮಾತನಾಡಿದರು. ಶಿಕ್ಷಣದಿಂದಲೆ ಸಮಾಜದ ಸಮಗ್ರ ಅಭಿವೃದ್ಧಿ ಸಾಧ್ಯ ಎಂದರು.ಚನ್ನಬಸವೇಶ್ವರ ಪದವಿ ಮಹಾವಿದ್ಯಾಲಯದ ಪ್ರೊ ಚಂದ್ರಶೇಖರ ಬಿರಾದಾರ ಮಾತನಾಡಿ, ಪ್ರಸ್ತುತ ಸಮಾಜಕ್ಕೆ ಅಗತ್ಯವಿರುವ ಶಿಕ್ಷಣದ ವ್ಯವಸ್ಥೆಯನ್ನು ಒದಗಿಸಬೇಕು. ನಮ್ಮ ಮಕ್ಕಳು ಜಾಗತಿಕ ಸ್ಪರ್ಧೆಯನ್ನು ಎದುರಿಸುವಂಥ ಪೂರಕ ವಾತಾವರಣಕ್ಕೆ ಒತ್ತು ನೀಡಬೇಕು, ಈ ದಿಸೆಯಲ್ಲಿ ಶಿಕ್ಷಕರು ಹಾಗೂ ಪಾಲಕರು ಅಗತ್ಯ ವಾತಾವರಣ ನಿರ್ಮಿಸಬೇಕು ಎಂದು ಹೇಳಿದರು. ಸತ್ಯನಿಕೇತನ ಶಿಕ್ಷಣ ಸಂಸ್ಥೆಯ ಸಂಸ್ಥೆಯ ಅಧ್ಯಕ್ಷ ಶರದ್ ಸಿರ್ಸೆ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ನಿರ್ದೇಶಕ ಶಿವಾನಂದ ಗುಂದಗಿ, ಪ್ರಾಚಾರ್ಯ ರೇಖಾ ಮಹಾಜನ್, ಉಮಾಕಾಂತ ಅಲ್ಮಾಜೆ, ವೈ.ಆರ್. ಇಂಗಳೆ, ಶೈಲಜಾ ನಾರಾ ಇದ್ದರು. ಪ್ರತಿಭಾವಂತ ಮಕ್ಕಳಾದ ಪ್ರಿಯಂಕಾ, ಅಂಬಿಕಾ, ಪೂಜಾ, ಶಾಮಸುಂದರ ಅನುಭವ ಹಂಚಿಕೊಂಡರು.ಇದೇ ಸಂದರ್ಭದಲ್ಲಿ ಮಕ್ಕಳಿಗೆ ಬಹುಮಾನ ವಿತರಿಸಲಾಯಿತು. ಎಂ.ಪಿ. ರಾಠೋಡ ನಿರ್ವಹಿಸಿದರು. ಅಶೋಕ ಮೈನಾಳೆ ವಂದಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.