ಬುಧವಾರ, ಜೂನ್ 23, 2021
28 °C

ಶಿಕ್ಷಣದಿಂದ ಮಾತ್ರ ಅಭಿವೃದ್ಧಿ ಸಾಧ್ಯ: ಶಾಸಕ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೂವಿನಹಡಗಲಿ: ಪ್ರತಿಯೊಂದು ಮಗು ಶಿಕ್ಷಣವನ್ನು ಪಡೆದಾಗ ಅಭಿವೃದ್ಧಿ ಸಾಧ್ಯವಾಗುವುದು. ಆಸ್ತಿಯನ್ನು ಕಳೆದುಕೊಳ್ಳಬಹುದು ಆದರೆ    ಕಲಿತ ವಿದ್ಯೆಯನ್ನು ಕಳೆದುಕೊಳ್ಳಲು ಸಾಧ್ಯವಿಲ್ಲ ಎಂದು ಶಾಸಕ ಚಂದ್ರಾನಾಯ್ಕ ಹೇಳಿದರು.ತಾಲ್ಲೂಕಿನ ಮಿರಾಕೊರ‌್ನಹಳ್ಳಿಯಲ್ಲಿ ಮೊರಾರ್ಜಿ ದೇಸಾಯಿ ಮಾದರಿ ವಸತಿ ಶಾಲೆಯ ನೂತನ ಕಟ್ಟಡ ನಿರ್ಮಾಣಕ್ಕೆ ಸೋಮವಾರ  ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.ಬಡ ಪ್ರತಿಭಾವಂತ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣವನ್ನು ಕೊಡುವ ಉದ್ದೇಶದಿಂದ ಸರ್ಕಾರ ಇಂತಹ ಯೋಜನೆಗಳನ್ನು ಜಾರಿಗೆ ತಂದಿದೆ. ಸುಮಾರು 5 ಕೋಟಿ ರೂಗಳ ವೆಚ್ಚದಲ್ಲಿ ಅದ್ಭುತ ಕಟ್ಟಡ ರೂಪುಗೊಳ್ಳಲಿದೆ ಅವಕಾಶಗಳನ್ನು ಬಳಸಿಕೊಂಡು ಉತ್ತಮ ಭವಿಷ್ಯಪಡೆದುಕೊಳ್ಳಬೇಕು ಎಂದರು.ಮಾಜಿ ಉಪಮುಖ್ಯಮಂತ್ರಿ ದಿ. ಎಂ.ಪಿ.ಪ್ರಕಾಶ್ ಅವರ ಕಾಲದಲ್ಲಿ ಈ ಶಾಲೆ ಮಂಜೂರಾಗಿದ್ದು, ಇದೀಗ ಅದರ ಕಟ್ಟಡ ಕಾಮಗಾರಿ ಆರಂಭಗೊಳ್ಳುತ್ತಿದ ಎಂದರು.ಮುಂಬರುವ ದಿನಗಳಲ್ಲಿ ಮುಖ್ಯ ಮಂತ್ರಿಗಳನ್ನು ಕರೆಯಿಸಿ ಅನೇಕ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇನೆ ಎಂದರು.ಮಾಜಿ ಶಾಸಕ ನಂದಿಹಳ್ಳಿ ಹಾಲಪ್ಪ, ತಾ.ಪಂ.ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಐಗೋಳ್ ಚಿದಾನಂದ, ಬಿಜೆಪಿ ತಾಲ್ಲೂಕು ಅಧ್ಯಕ್ಷ ಜ್ಯೋತಿ ಮಹೇಂದ್ರ ಮಾತನಾಡಿದರು.ಗ್ರಾ.ಪಂ.ಅಧ್ಯಕ್ಷ ಭೋವಿ ತಿಪ್ಪೇಶ ಅಧ್ಯಕ್ಷತೆ ವಹಿಸಿದ್ದರು. ಸೋಗಿ ಜಿ.ಪಂ.ಸದಸ್ಯೆ ನಳಿನಾ ವೀರಭದ್ರಪ್ಪ, ತಾ.ಪಂ. ಉಪಾಧ್ಯಕ್ಷೆ ಸಾವಿತ್ರಮ್ಮ ಮಂಜುನಾಥ, ತಾ.ಪಂ.ಸದಸ್ಯೆ ಪ್ರೇಮಾರಾಜೇಂದ್ರಗೌಡ, ಬಿಜೆಪಿ ಪ್ರಧಾನ ಕಾರ್ಯದರ್ಶಿ ಪೂಜಪ್ಪ, ತಾ.ಪಂ. ಕಾರ್ಯ ನಿರ್ವಾಹಕಾಧಿಕಾರಿ ಮೇಘಾನಾಯ್ಕ, ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಎಂ.ದ್ಯಾಮಪ್ಪ ಉಪಸ್ಥಿತರಿದ್ದರು.ಎ.ಸೋಮಶೇಖರಪ್ಪ ಪ್ರಾರ್ಥನೆ ಹಾಡಿದರು. ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಎಂ.ದ್ಯಾಮಪ್ಪ ಸ್ವಾಗತಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.