ಪುತ್ತೂರು: ವ್ಯಕ್ತಿಯ ವೈಯಕ್ತಿಕ ಬೆಳವಣಿಗೆಯೊಂದಿಗೆ ಒಟ್ಟು ಸಮಾಜದ ಅಭಿವೃದ್ಧಿ ಶಿಕ್ಷಣದಿಂದ ಮಾತ್ರ ಸಾಧ್ಯ ಎಂದು ಜಿಲ್ಲಾ ಪಂಚಾಯಿತಿ ಸದಸ್ಯ ಕೇಶವ ಗೌಡ ಬಜತ್ತೂರು ಹೇಳಿದರು.

ಪುತ್ತೂರು ತಾಲ್ಲೂಕಿನ ಚಿಕ್ಕಮುಡ್ನೂರು ಗ್ರಾಮದ ಬೀರಹಿತ್ಲು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ನಡೆದ ವಜ್ರಮಹೋತ್ಸವ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ತಾ.ಪಂ. ಅಧ್ಯಕ್ಷ ಶಂಭು ಭಟ್ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಸಾಮಾಜಿಕ ಬೆಳವಣಿಗೆಯಲ್ಲಿ ಹೆತ್ತವರ ಮತ್ತು ಶಿಕ್ಷಕರ ಪಾತ್ರ ಬಹುಮುಖ್ಯ ಎಂದು ಅವರು ಹೇಳಿದರು.

ತಾ.ಪಂ.ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ತಾ.ಪಂ.ಸದಸ್ಯೆ ನೇತ್ರಾವತಿ ಕೆ.ಪಿ.ಗೌಡ , ಬನ್ನೂರು ಗ್ರಾ.ಪಂ. ಅಧ್ಯಕ್ಷೆ ಸೇಸಮ್ಮ, ಸದಸ್ಯರಾದ ಚಂದ್ರಶೇಖರ್ ಮತ್ತು ತಿಮ್ಮಪ್ಪ ಗೌಡ, ಕೋಡಿಂಬಾಡಿ ಕ್ಲಸ್ಟರ್ ಸಮೂಹ ಸಂಪನ್ಮೂಲ ವ್ಯಕ್ತಿ ಪುಷ್ಪಾ ಕೆಮ್ಮಾಯಿ ಇದ್ದರು.

ವಜ್ರಮಹೋತ್ಸವ ಸಮಿತಿಯ ಅಧ್ಯಕ್ಷ ಡಾ.ಅಶೋಕ್ ಪಡಿವಾಳ್ . ಗೌರವಾಧ್ಯಕ್ಷ ಧನ್ಯಕುಮಾರ್ ಎಣೆಮೊಗ್ರು ಅತಿಥಿಯಾಗಿದ್ದರು. ಶಾಲಾ ಮುಖ್ಯಗುರು ಘನವತಿ ಐ.ಎಸ್, ಶಾಲಾ ಎಸ್ಡಿ.ಎಂ.ಸಿ ಅಧ್ಯಕ್ಷ ಗಂಗಾಧರ್ ಅನಂತಿಮಾರು , ಶಿಕ್ಷಕರಾದ ಶ್ರೀಕಾಂತ್ ನಾಯಕ್ , ಶಶಿಕಲಾ , ರೆಜಿನಾ ಡಿ~ಸೋಜಾ , ಜೂಲಿಯಾನ ಗ್ಲೋರಿಯಸ್ , ವಿದ್ಯಾರ್ಥಿ ನಾಯಕ ಧನುಷ್ ಮತ್ತಿತರರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.