ಶಿಕ್ಷಣದಿಂದ ಮಾತ್ರ ಸಮಾಜ ಪರಿವರ್ತನೆ ಸಾಧ್ಯ

7

ಶಿಕ್ಷಣದಿಂದ ಮಾತ್ರ ಸಮಾಜ ಪರಿವರ್ತನೆ ಸಾಧ್ಯ

Published:
Updated:
ಶಿಕ್ಷಣದಿಂದ ಮಾತ್ರ ಸಮಾಜ ಪರಿವರ್ತನೆ ಸಾಧ್ಯ

ಕೃಷ್ಣರಾಜಪುರ: `ಶಿಕ್ಷಣದಿಂದ ಮಾತ್ರ ಸಮಾಜದ ಪರಿವರ್ತನೆ ಸಾಧ್ಯ. ಸಮಾಜ ಬದಲಾವಣೆ ಕಾಣಲು ಶಿಕ್ಷಣ ಪರಿಣಾಮಕಾರಿ ಪಾತ್ರ ವಹಿಸುತ್ತದೆ~ ಎಂದು ಬಿಬಿಎಂಪಿ ಸದಸ್ಯ ಬೈರತಿ ಎನ್.ಬಸವರಾಜ್ ಅಭಿಪ್ರಾಯಪಟ್ಟರು.ವಿಜನಾಪುರ- ಕೊತ್ತೂರು ಗ್ರಾಮದ ಬಳಿಯ ಜ್ಯೂಬಿಲಿ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶಾಲೆಯ ಬಡ ಪ್ರತಿಭಾವಂತ 80 ವಿದ್ಯಾರ್ಥಿಗಳಿಗೆ ಶೈಕ್ಷಣಿಕ ನೆರವಿನ ಚೆಕ್ ವಿತರಿಸಿ ಅವರು ಮಾತನಾಡಿದರು.ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಪೀಟರ್ ಜಾರ್ಜ್, ಕಾರ್ಯದರ್ಶಿ ಮುರಳೀಧರ ನಾಯಕ್,ಮುಖಂಡರಾದಮುನಿರಾಜು, ದಾಮೋದರರಾಜು ಮಾತನಾಡಿದರು. ಸಾಮಾಜಿಕ ಕಾರ್ಯಕರ್ತ ದಿವಾಕರನ್, ನಗರಸಭೆ ಮಾಜಿ ಸ್ಥಾಯಿ ಸಮಿತಿ ಅಧ್ಯಕ್ಷ ಅಮಾನುಲ್ಲ,  ಮುಖ್ಯ ಶಿಕ್ಷಕಿ ಲತಾ ಸೇರಿದಂತೆ ಕೇರಳ ಸಮಾಜದ ಪದಾಧಿಕಾರಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry