ಗುರುವಾರ , ಮೇ 13, 2021
19 °C

ಶಿಕ್ಷಣದಿಂದ ಮುಖ್ಯವಾಹಿನಿಗೆ ಬರಬೇಕು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಕುರುಬ ಜನಾಂಗದವರು ಜಾತಿಯ ಕೀಳರಿಮೆಯನ್ನು ತೊಡೆದು ಸಮಾಜದ ಏಳಿಗೆಗಾಗಿ ಮುಖ್ಯವಾಹಿನಿಗೆ ಬರಬೇಕು~ ಎಂದು ಕಾಗಿನೆಲೆ ಕನಕಪೀಠದ ಈಶ್ವರಾನಂದಪುರಿ ಸ್ವಾಮೀಜಿ ಕರೆ ನೀಡಿದರು.

ನಗರದ ಹೊಸ ದೇವರಗುಡ್ಡದಲ್ಲಿ ಇತ್ತೀಚೆಗೆ ನಡೆದ ಬೀರೇದೇವರ ಉತ್ಸವ ಹಾಗೂ ಕನಕದಾಸ ಜಯಂತಿಯಲ್ಲಿ ಮಾತನಾಡಿ, `ಜನಾಂಗದ ಜನರು ತಮ್ಮ ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಮತ್ತು ಸಂಸ್ಕಾರ ನೀಡಬೇಕು. ಶಿಕ್ಷಣದ ಮೂಲಕ ಸಮಾಜದ ಮುಖ್ಯವಾಹಿನಿಗೆ ಬರಬೇಕು~ ಎಂದರು.

ಶಾಸಕ ಎಂ.ಕೃಷ್ಣಪ್ಪ, ಸಮಾರಂಭದಲ್ಲಿ ಬಿಬಿಎಂಪಿ ಸದಸ್ಯರಾದ ಟಿ.ವಿ.ಕೃಷ್ಣಪ್ಪ, ಕೆ.ದೊಡ್ಡಣ್ಣ, ಕನಕದಾಸ ಸೇವಾ ಸಮಿತಿ ಅಧ್ಯಕ್ಷ ಆರ್.ಪಿ.ಎಸ್.ರೆಡ್ಡಿ ಇತರರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.