ಗುರುವಾರ , ಮೇ 13, 2021
16 °C

ಶಿಕ್ಷಣದಿಂದ ಸಮಾಜದ ಅಭಿವೃದ್ಧಿ- ದಿನೇಶ್ ಗುಂಡೂರಾವ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುವುದರಿಂದ ಸಮಾಜದ ಅಭಿವೃದ್ಧಿ ಸಾಧ್ಯ' ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟರು.ರಾಜಸ್ತಾನ ಕಾಸ್ಮೊ ಫೌಂಡೇಷನ್ ಟ್ರಸ್ಟ್ ಎಂಟನೇ ಕ್ಲಾತ್ ಬ್ಯಾಂಕ್ ಯೋಜನೆ ಅಡಿ ಭಾನುವಾರ ನಗರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಶಾಲಾ ಸಮವಸ್ತ್ರ ವಿತರಣೆ ಮಾಡಿ ಅವರು ಮಾತನಾಡಿದರು.ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡುವುದು ಪ್ರತಿಯೊಬ್ಬ ಪೋಷಕರ ಕರ್ತವ್ಯ. ಉತ್ತಮ ಶಿಕ್ಷಣ, ಆರೋಗ್ಯ ವ್ಯವಸ್ಥೆ ಕಲ್ಪಿಸುವುದರಿಂದ ಮಕ್ಕಳ ಮುಂದಿನ ಭವಿಷ್ಯಕ್ಕೆ ಭದ್ರ ಬುನಾದಿ ಹಾಕಿದಂತಾಗುತ್ತದೆ. ಆ ನಿಟ್ಟಿನಲ್ಲಿ ಪ್ರತಿಯೊಬ್ಬರು ಕಾರ್ಯಪ್ರವೃತ್ತರಾಬೇಕು ಎಂದು ಹೇಳಿದರು.ಶಾಸಕ ಆನಂದ ಸಿಂಗ್ ಮಾತನಾಡಿ, `ಸಂಸ್ಥೆಯು ಶಿಕ್ಷಣ, ದಾಸೋಹ, ಅರೋಗ್ಯ, ಉಚಿತ ಅರೋಗ್ಯ ಶಿಬಿರ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಉತ್ತಮ ಸಮಾಜ ಸೇವಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದೆ. ಇಂತಹ ಕಾರ್ಯಗಳಲ್ಲಿ ಎಲ್ಲರೂ ಕೈಜೋಡಿಸಬೇಕು ನೀಡಬೇಕು' ಎಂದರು.ಟ್ರಸ್ಟ್‌ನ ಕ್ಲಾತ್ ಬ್ಯಾಂಕ್ ಯೋಜನೆಯ ಅಧ್ಯಕ್ಷ ಸಂಜಯ್ ಭಂಡಾರಿ ಮಾತನಾಡಿ, ಶಿಕ್ಷಣಕ್ಕೆ ಪ್ರೋತ್ಸಾಹ ನೀಡುವ ಉದ್ದೇಶದಿಂದ ಕಳೆದ 8 ವರ್ಷಗಳಿಂದ ಪ್ರತಿ ವರ್ಷ ಐದು ಸಾವಿರ ವಿದ್ಯಾರ್ಥಿಗಳಿಗೆ ಉಚಿತ ಸಮವಸ್ತ್ರ, ನೋಟ್‌ಬುಕ್ ವಿತರಿಸಲಾಗುತ್ತಿದೆ ಎಂದರು.  ಕಾರ್ಯಕ್ರಮದಲ್ಲಿ ನಗರದ ವಿವಿಧ ಶಾಲೆಗಳ ಐದು ಸಾವಿರ ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರವನ್ನು ವಿತರಿಸಲಾಯಿತು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.