ಶಿಕ್ಷಣದ ಸಾರ್ವತ್ರೀಕರಣಕ್ಕೆ ಯತ್ನ

ಭಾನುವಾರ, ಜೂಲೈ 21, 2019
27 °C

ಶಿಕ್ಷಣದ ಸಾರ್ವತ್ರೀಕರಣಕ್ಕೆ ಯತ್ನ

Published:
Updated:

ಸಿದ್ದಾಪುರ: ಶಿಕ್ಷಣವನ್ನು ಸಾರ್ವತ್ರೀಕರಣಗೊಳಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ದೊಡ್ಡ ಕೊಡುಗೆ ನೀಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ವಿಶ್ವೇಶ್ವರ ಹೆಗಡೆ ಕಾಗೇರಿ ಅಭಿಪ್ರಾಯಪಟ್ಟರು.ಪಟ್ಟಣದ ಹಾಳದಕಟ್ಟದ ಸರ್ಕಾರಿ ಪ್ರೌಢಶಾಲೆಯ ನೂತನ ಕೊಠಡಿಗಳ ಉದ್ಘಾಟನೆ ಮತ್ತು ಪಟ್ಟಣ ಪಂಚಾಯ್ತಿ ವತಿಯಿಂದ ಕಂಪ್ಯೂಟರ್ ವಿತರಣೆಯ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.`ಶಿಕ್ಷಣಕ್ಕಾಗಿ ಕೇಂದ್ರ ಸರ್ಕಾರವೂ ಸಹಾಯ ಮಾಡುತ್ತಿದೆ. ಆದರೆ  ರಾಜ್ಯ ಸರ್ಕಾರವು  ಕೇಂದ್ರ ಸರ್ಕಾರಕ್ಕಿಂತ ಒಂದು ಹೆಜ್ಜೆ ಮುಂದೆ  ಹೋಗಿ ಶಿಕ್ಷಣದ ಕೆಲಸ ಮಾಡುತ್ತಿದೆ. ಕೇಂದ್ರ ಸರ್ಕಾರದ ಸಹಾಯ ಇಲ್ಲದ ವಿಭಾಗದಲ್ಲಿಯೂ ಕೆಲಸ ಮಾಡುತ್ತಿದೆ.    ರಾಜ್ಯ ಸರ್ಕಾರದ ಪ್ರಯತ್ನದಿಂದಲೇ ಹೆಚ್ಚು ಹೆಚ್ಚು ಮಕ್ಕಳು ಶಾಲೆಗೆ ಬರಲು ಸಾಧ್ಯವಾಗಿದೆ~ ಎಂದರು.ಪ.ಪಂ. ಅಧ್ಯಕ್ಷ ಕೆ.ಜಿ. ನಾಯ್ಕ ಅಧ್ಯಕ್ಷತೆ ವಹಿಸಿದ್ದರು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಡಿ.ಕೆ. ಶಿವಕುಮಾರ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ವಿ. ನಾಯ್ಕ, ಎಸ್‌ಡಿಎಂಸಿ ಉಪಾಧ್ಯಕ್ಷ   ನಾಗರಾಜ ನಾಯ್ಕ,  ಪ.ಪಂ. ಉಪಾಧ್ಯಕ್ಷೆ  ನೇತ್ರಾವತಿ ನಾಯ್ಕ, ಸದಸ್ಯ ಮಾರುತಿ ನಾಯ್ಕ,  ತಹಸೀಲ್ದಾರ ಗಣಪತಿ ಕಟ್ಟಿನಕೆರೆ,  ತಾ.ಪಂ. ಕಾರ್ಯನಿರ್ವಹ ಣಾಧಿಕಾರಿ ವಿ.ಎಸ್. ಹೆಗಡೆ ಉಪಸ್ಥಿತರಿದ್ದರು.ಮುಖ್ಯೋಪಾಧ್ಯಾಯ ಎಂ.ಎಸ್. ಭಟ್ಟ ಸ್ವಾಗತಿಸಿದರು.  ಶಿಕ್ಷಕ ಬಿ.ಎಸ್. ಫರ್ನಾಂಡೀಸ್ ನಿರೂಪಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry