ಮಂಗಳವಾರ, ಜೂಲೈ 7, 2020
22 °C

ಶಿಕ್ಷಣ ಅಭಿವೃದ್ಧಿಯಲ್ಲಿ ಪಕ್ಷಭೇದ ಸಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿಕ್ಷಣ ಅಭಿವೃದ್ಧಿಯಲ್ಲಿ ಪಕ್ಷಭೇದ ಸಲ್ಲ

ಬ್ರಹ್ಮಾವರ: ‘ಜವಾಬ್ದಾರಿಯುತ ಕೆಲಸವಾದ ಶಿಕ್ಷಕ ವೃತ್ತಿಯಿಂದ ಶಿಕ್ಷಣ ಕ್ಷೇತ್ರ ತನ್ನ ಪಾವಿತ್ರ್ಯತೆ ಉಳಿಸಿಕೊಂಡಿದೆ. ಜನಪ್ರತಿನಿಧಿಗಳು ಪಕ್ಷಭೇದ ಮರೆತು ಶಿಕ್ಷಣದ ಅಭಿವೃದ್ಧಿಗೆ ಕಾಳಜಿ ವಹಿಸಬೇಕು’  ಎಂದು ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷೆ ಜ್ಯೋತಿ ಶೆಟ್ಟಿ ಹೇಳಿದರು. ಬ್ರಹ್ಮಾವರದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಭಾಂಗಣದಲ್ಲಿ ಮಂಗಳವಾರ ಸರ್ವಶಿಕ್ಷಣ ಅಭಿಯಾನದಡಿ ನಡೆದ ವಿಶೇಷ ಅಗತ್ಯವುಳ್ಳ ಮಕ್ಕಳ ಸಾಧನ ಸಲಕರಣೆಗಳ ವಿತರಣಾ ಸಮಾರಂಭದಲ್ಲಿ ಅವರು ಮಾತನಾಡಿದರು.ಸಾರ್ವಜನಿಕ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಉಡುಪಿ, ಬ್ರಹ್ಮಾವರದ ಕ್ಷೇತ್ರ ಸಂಪನ್ಮೂಲ ಕೇಂದ್ರದ ಜಂಟಿ ಆಶ್ರಯದಲ್ಲಿ ಸಮಾರಂಭ ನಡೆಯಿತು. ಈ ಸಂದರ್ಭದಲ್ಲಿ ಶ್ರವಣ ಸಾಧನ, ಗಾಲಿ ಕುರ್ಚಿ, ಎಂ.ಆರ್.ಕಿಟ್, ಮುಂತಾದ ಅನೇಕ ಸಲಕರಣೆಗಳನ್ನು ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ನೀಡಲಾಯಿತು. ಕ್ರೀಡಾ ವಿಭಾಗದಲ್ಲಿ ರಾಷ್ಟ್ರ ಮತ್ತು ರಾಜ್ಯ ಮಟ್ಟದಲ್ಲಿ ವಿಶೇಷ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗುರುತಿಸಿ ನಗದು ಬಹುಮಾನ ನೀಡಲಾಯಿತು.ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷ ಬಾಬು ಶೆಟ್ಟಿ, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಬಿ.ಭುಜಂಗ ಶೆಟ್ಟಿ, ಕ್ಷೇತ್ರ ಶಿಕ್ಷಣಾಧಿಕಾರಿ ನಾಗೇಶ್ ಶಾನುಭಾಗ್, ವಾರಂಬಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಸ್.ನಾರಾಯಣ, ಜಿಲ್ಲಾ ಪಂಚಾಯಿತಿ ಸುನೀತಾ ರಾಜಾರಾಂ, ಸರ್ಕಾರಿ ಪ.ಪೂ ಕಾಲೇಜಿನ ಪ್ರಾಂಶುಪಾಲೆ ತಾರಾದೇವಿ, ಬ್ರಹ್ಮಾವರ ವಲಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸೀತಾರಾಮ ಶೆಟ್ಟಿ, ಬೈಂದೂರು ವಲಯಕ್ಷೇತ್ರ ಶಿಕ್ಷಣಾಧಿಕಾರಿ ಚಂದ್ರಶೇಖರ್, ಜಿ.ಪಂ. ಸದಸ್ಯೆ ಮಲ್ಲಿಕಾ ಬಾಲಕೃಷ್ಣ ಪೂಜಾರಿ, ಕ್ಷೇತ್ರ ಸಂಪನ್ಮೂಲ ಕೇಂದ್ರದ ವಿಶ್ವಾಸ್, ಬಿ.ಆರ್.ಸಿ ಆರೂರು ತಿಮ್ಮಪ್ಪ ಶೆಟ್ಟಿ, ಶಿವಾನಂದ, ಕೃಷ್ಣ ಇದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.