ಶಿಕ್ಷಣ ಇಲಾಖೆಯತ್ತ ಗಮನವಿರಲಿ

7

ಶಿಕ್ಷಣ ಇಲಾಖೆಯತ್ತ ಗಮನವಿರಲಿ

Published:
Updated:

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಶಿಕ್ಷಣ ಹಕ್ಕು ಕಾಯಿದೆಯ ಅನುಷ್ಠಾನಕ್ಕೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಸಹಕಾರದ ಬಗ್ಗೆ ಸಾರ್ವಜನಿಕರಿಗೆ ಅನುಮಾನಗಳಿವೆ. ಏಕೆಂದರೆ ಖಾಸಗಿ ಶಿಕ್ಷಣ ಸಂಸ್ಥೆಗಳ ಎಲ್ಲಾ ಅಕ್ರಮ ವ್ಯವಹಾರಗಳಿಗೆ ತರಬೇತಿ ದೊರೆಯುವುದೇ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ.ಖಾಸಗಿ ಶಿಕ್ಷಣ ಸಂಸ್ಥೆಗಳ ಕಾನೂನುಬಾಹಿರ ದಂಧೆಗಳು,ಅವ್ಯವಹಾರಗಳು ಮಕ್ಕಳಿಗೂ ಗೊತ್ತಿವೆ. ಆದರೆ ಶಿಕ್ಷಣ ಇಲಾಖೆ ಅಧಿಕಾರಿಗಳು ಮಾತ್ರ ಏನೂ ಗೊತ್ತಿಲ್ಲದವರಂತೆ ನಟಿಸುತ್ತಾರೆ. ಶಿಕ್ಷಣ ಹಕ್ಕು ಕಾಯಿದೆ ಅನುಷ್ಠಾನದ ವಿಷಯದಲ್ಲೂ ಇಲಾಖೆ ಜಾಣ ಕುರುಡು ಮತ್ತು ಕಿವುಡುತನ ಪ್ರದರ್ಶಿಸುವ ಸಾಧ್ಯತೆ ಇದೆ. ಶಿಕ್ಷಣ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಈ ಕುರಿತು ಎಚ್ಚರವಹಿಸಬೇಕು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry