ಭಾನುವಾರ, ಡಿಸೆಂಬರ್ 8, 2019
21 °C

ಶಿಕ್ಷಣ ಕದಿಯಲು ಆಗದ ಆಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿಕ್ಷಣ ಕದಿಯಲು ಆಗದ ಆಸ್ತಿ

ಚಿಕ್ಕೋಡಿ: `ಶಿಕ್ಷಣವೊಂದೇ ಮತ್ತೊ ಬ್ಬರಿಂದ  ಕೊಳ್ಳಲು, ಕದಿಯಲು ಆಗದ ಆಸ್ತಿ. ಅದನ್ನು ಸ್ವಯಾರ್ಜಿತ ಮಾಡಿಕೊಳ್ಳಲು ಕಠಿಣ ಪರಿಶ್ರಮ ಮತ್ತು ಶ್ರದ್ಧೆ ಅಗತ್ಯ~ ಎಂದು ಬೆಂಗಳೂರಿನ ಪದ್ಮಾವತಿ ಉತ್ಥಾನ ಮಹಿಳಾ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷೆ ಕವಿತಾ ಜೈನ್ ಹೇಳಿದರು.ತಾಲ್ಲೂಕಿನ ಯಕ್ಸಂಬಾ ಗ್ರಾಮದಲ್ಲಿ ಇತ್ತೀಚೆಗೆ ಸಹಕಾರ ಶಿಕ್ಷಣ ಮತ್ತು ಸಮಾಜ ಸೇವಾ ಸಂಸ್ಥೆಯ ವಿವಿಧ ಅಂಗಸಂಸ್ಥೆಗಳ ವಾರ್ಷಿಕ ಸ್ನೇಹ ಸಮ್ಮೇಳನವನ್ನು ಉದ್ಘಾಟಿಸಿ ಅವರು ಮಾತನಾಡಿದರು.ರಾಜ್ಯ ಬಿಜೆಪಿ ಕಾರ್ಯದರ್ಶಿ ಸುಜಾತಾ ಪಾಟೀಲ ಮಾತನಾಡಿ, ಜೊಲ್ಲೆ ಉದ್ಯೋಗ ಸಮೂಹ ಸಂಸ್ಥೆ  ಗ್ರಾಮೀಣ ಭಾಗದಲ್ಲಿ ಸಿಬಿಎಸ್‌ಇ ಶಾಲೆಯನ್ನು ಆರಂಭಿಸುವ ಮೂಲಕ ಹಳ್ಳಿಯ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ನೀಡುತ್ತಿರುವುದು ಶ್ಲಾಘನೀಯ ವಾಗಿದ್ದು, ಈ ಭಾಗದ ಜನರು ಇದರ ಸದುಪಯೋಗ ಪಡೆದುಕೊಂಡು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಬೇಕು ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷೆ ಶಶಿಕಲಾ ಜೊಲ್ಲೆ ಮಾತನಾಡಿ, ಗ್ರಾಮೀಣ ಪ್ರದೇಶದ ಮಕ್ಕಳು ನಗರದ ವಿದ್ಯಾರ್ಥಿಗಳ ಪೈಪೋಟಿ ಎದುರಿಸುವ ಆತ್ಮವಿಶ್ವಾಸ ಬೆಳಸಿಕೊಂಡು ಜಾಗತೀಕರಣದದಿಂದ ಉಂಟಾಗಿರುವ ಸ್ಪರ್ಧೆಯಲ್ಲಿ ಯಶಸ್ಸು ಗಳಿಸಬೇಕು ಎಂದರು. ಎಂ.ಬಾಗವಾನ  ಆರ್.ಕೆ.ಶಫಿ ಮಾತನಾಡಿದರು. ಈ ಸಂದರ್ಭದಲ್ಲಿ ಸಂಸ್ಥೆಯ ಸಂಸ್ಥಾಪಕ ಅಣ್ಣಾ ಸಾಹೇಬ ಜೊಲ್ಲೆ, ಜಯಾನಂದ ಜಾಧವ, ಜ್ಯೋತಿ ಪ್ರಸಾದ ಜೊಲ್ಲೆ, ಯಾಶೀನ ತಾಂಬೂಳೆ, ಅವಕ್ಕಾ ವಾಳಕೆ, ಸುನಂದಾ ಜಾಧವ ಮುಂತಾದವರು ಉಪಸ್ಥಿತರಿದ್ದರು. ಪ್ರಾಚಾರ್ಯ ಬಸವರಾಜ ಸ್ವಾಗತಿಸಿದರು. ಸುನೀತಾ ದೇವನಗೋಳ ಕಾರ್ಯಕ್ರಮ ನಿರೂಪಿಸಿದರು. ರಾಣಾ ವಂದಿಸಿದರು.

ಪ್ರತಿಕ್ರಿಯಿಸಿ (+)