ಶಿಕ್ಷಣ, ಕೃಷಿ ಕ್ಷೇತ್ರಕ್ಕೆ ಆದ್ಯತೆ- ರೇವಣ್ಣ

7

ಶಿಕ್ಷಣ, ಕೃಷಿ ಕ್ಷೇತ್ರಕ್ಕೆ ಆದ್ಯತೆ- ರೇವಣ್ಣ

Published:
Updated:

ಹೊಳೆನರಸೀಪುರ: ಶಿಕ್ಷಣ ಕ್ಷೇತ್ರದ ಪುನಶ್ಚೇತನ ಹಾಗೂ ರೈತರ ಸಾಲ ಮನ್ನಾ ಇವೆರಡು ನಮ್ಮ ಮೊದಲ ಆದ್ಯತೆ ಎಂದು ಶಾಸಕ ಎಚ್.ಡಿ. ರೇವಣ್ಣ ಹೇಳಿದರು.

ಸೋಮವಾರ ಇಲ್ಲಿನ ಶಿಕ್ಷಕರ ಭವನದಲ್ಲಿ ಏರ್ಪಡಿಸಿದ್ದ ಪ್ರೌಢಶಾಲಾ ಶಿಕ್ಷಕರ ಶೈಕ್ಷಣಿಕ ಕಾರ್ಯಾಗಾರ ಉದ್ಘಾಟಿಸಿ ವರು ಮಾತನಾಡಿದರು.ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಮತ್ತು ಶಿಕ್ಷಕರಿಗೆ ಸಹಕಾರಿಯಾಗುವ ಯವುದೇ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿಲ್ಲ. ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಶಿಕ್ಷಣ ಕ್ಷೇತ್ರಕ್ಕೆ ರೂ. 5 ಸಾವಿರ ಕೋಟಿ ಹಣ ನೀಡಿ ಶಿಕ್ಷ ಣ ಕ್ಷೇತ್ರವನ್ನು ಪುನಶ್ಚೇತನಗೊಳಿಸಲಿ ದೆ. ರೈತರ ಸಾಲ ಮನ್ನಾ ಮಾಡಲಿದೆ ಎಂದು ಶಾಸಕ ಎಚ್.ಡಿ. ರೇವಣ್ಣ ಹೇಳಿದರು.ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಬೇಕು. ಅದಕ್ಕೆ ಬೇಕಾದ ಎ್ಲ್ಲಲ ಸೌಲಭ್ಯಗಳನ್ನು ಸರ್ಕಾರ ಒದಗಿಸಿ ಕೊಡಬೇಕೆಂದರು. ಪ್ರಾಧ್ಯಾಪಕ ಮಲ್ಲೇ ಶ್ ಗೌಡ, ವಿಧಾನ ಪರಿಷತ್ ಸದಸ್ಯ ಮರಿತಿಬ್ಬೇಗೌಡ, ಬಿಇಓ ಯೋಗೇಶ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷೆ ಚಂದ್ರಮತಿ ಇದ್ದಾರೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry