ಶುಕ್ರವಾರ, ಏಪ್ರಿಲ್ 23, 2021
22 °C

ಶಿಕ್ಷಣ ಕ್ಷೇತ್ರಕ್ಕೆ ಎಫ್‌ಡಿಐ: ಸಲಹೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುಂಬೈ (ಪಿಟಿಐ): ಭಾರತದ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಮುಂದಿನ ಎಂಟು ವರ್ಷಗಳಲ್ಲಿ ವಿದೇಶಿ ನೇರ ಬಂಡವಾಳ ಹೂಡಿಕೆ (ಎಫ್‌ಡಿಐ) ಮೂಲಕ ಅಂದಾಜು 19000 ಕೋಟಿ ಡಾಲರ್(10.26 ಲಕ್ಷ ಕೋಟಿ) ಹೂಡಿಕೆ ಅಗತ್ಯವಿದೆ ಎಂದು ಜಾಗತಿಕ ಶೈಕ್ಷಣಿಕ ಸಲಹಾ ಸಂಸ್ಥೆ `ಡಿಲೊಯಿಟ್~ ಹೇಳಿದೆ.ಚೀನಾ ಮತ್ತು ಅಮೆರಿಕ ಹೊರತುಪಡಿಸಿದರೆ ಉನ್ನತ ಶಿಕ್ಷಣ ರಂಗದಲ್ಲಿ ಭಾರತ ವಿಶ್ವದಲ್ಲಿಯೇ ಮೂರನೇ ಸ್ಥಾನದಲ್ಲಿದೆ. ಈಗಿರುವ ಒಟ್ಟು ಉನ್ನತ ಶಿಕ್ಷಣ ಪ್ರವೇಶಾರ್ಥಿಗಳ ಅನುಪಾತವನ್ನು (ಜಿಇಆರ್)  2020ರ ವೇಳೆಗೆ ದ್ವಿಗುಣಗೊಳಿಸಲು ಸರ್ಕಾರ ಯೋಜನೆ ರೂಪಿಸಿದೆ. ಇದಕ್ಕೆ `ಎಫ್‌ಡಿಐ~ ಮೂಲಕ ಹೆಚ್ಚಿನ ಬಂಡವಾಳ ಆಕರ್ಷಿಸುವ ಅಗತ್ಯ ಇದೆ ಎಂದು ಸಲಹೆ ನೀಡಿದೆ.ಶೈಕ್ಷಣಿಕ ಯೋಜನೆ ಮತ್ತು ಆಡಳಿತಾತ್ಮಕ ವಿಷಯಗಳಿಗೆ ಸಂಬಂಧಿಸಿದ ರಾಷ್ಟ್ರೀಯ ವಿಶ್ವವಿದ್ಯಾಲಯ (ಎನ್‌ಯುಪಿಇಎ) ಇತ್ತೀಚೆಗೆ ಬಿಡುಗಡೆ ಮಾಡಿರುವ ಅಂಕಿ-ಅಂಶದಂತೆ ದೇಶದ ಉನ್ನತ ಶಿಕ್ಷಣ ವಲಯದಲ್ಲಿ ಖಾಸಗಿ ಸಂಸ್ಥೆಗಳ ಪಾತ್ರ ಬಹುಮುಖ್ಯವಾದುದು. ಕಳೆದ 10 ವರ್ಷಗಳಲ್ಲಿ ಖಾಸಗಿ ಸಂಸ್ಥೆಗಳು 40 ಕೋಟಿ ಡಾಲರ್ ಬಂಡವಾಳ ಹೂಡಿವೆ ಎಂದು ವಿವರಿಸಿದೆ.610 ವಿಶ್ವವಿದ್ಯಾಲಯ, 33,023 ಕಾಲೇಜುಗಳು ಭಾರತದ ಉನ್ನತ ಶಿಕ್ಷಣ ವ್ಯವಸ್ಥೆಯ ವ್ಯಾಪ್ತಿಗೆ ಬರುತ್ತವೆ ಎಂದೂ ಈ ವರದಿ ಹೇಳಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.