ಶಿಕ್ಷಣ ಕ್ಷೇತ್ರದಲ್ಲಿ ಮಠಗಳ ಸೇವೆ ಶ್ಲಾಘನೀಯ

ಶನಿವಾರ, ಮೇ 25, 2019
32 °C

ಶಿಕ್ಷಣ ಕ್ಷೇತ್ರದಲ್ಲಿ ಮಠಗಳ ಸೇವೆ ಶ್ಲಾಘನೀಯ

Published:
Updated:

ರಾಜರಾಜೇಶ್ವರಿನಗರ: `ಶಿಕ್ಷಣ ಕ್ಷೇತ್ರದಲ್ಲಿ ಮಠ-ಮಾನ್ಯಗಳು ಸರ್ಕಾರಕ್ಕಿಂತ ಹೆಚ್ಚಿನ ಸೇವೆ ಸಲ್ಲಿಸುತ್ತಿವೆ~ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಶ್ಲಾಘಿಸಿದರು.ಉತ್ತರಹಳ್ಳಿ ಸಮೀಪದ ಎಸ್.ಜೆ.ಬಿ ತಾಂತ್ರಿಕ ಕಾಲೇಜಿನಲ್ಲಿ ಸಿವಿಲ್ ಮತ್ತು ಮೆಕ್ಯಾನಿಕಲ್ ಎಂಜಿನಿಯರಿಂಗ್ ವಿಭಾಗಗಳ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.`ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಶೈಕ್ಷಣಿಕ ಯೋಜನೆಗಳಿಗೆ ರೂ. 12 ಸಾವಿರ ಕೋಟಿ ಅನುದಾನ ಬಿಡುಗಡೆ ಮಾಡಿದೆ~ ಎಂದು ಹೇಳಿದರು.`ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಬಾಲಗಂಗಾಧರನಾಥ ಸ್ವಾಮೀಜಿ ಅವರು ಶೈಕ್ಷಣಿಕ ಸೇವಾ ಕಾರ್ಯಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ.ಅವರಿಗೆ ಪದ್ಮವಿಭೂಷಣ ಪ್ರಶಸ್ತಿ ನೀಡುವಂತೆ ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು~ ಎಂದು ಅವರು ತಿಳಿಸಿದರು.ಆದಿಚುಂಚನಗಿರಿಯ ಬಾಲಗಂಗಾಧರನಾಥ ಸ್ವಾಮೀಜಿ ಮಾತನಾಡಿ, `ಸಂಸ್ಥೆಯಲ್ಲಿ ನರ್ಸರಿಯಿಂದ ಉನ್ನತ ತಾಂತ್ರಿಕ ಶಿಕ್ಷಣದವರೆಗೆ ಆರು ಸಾವಿರ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ~ ಎಂದರು.ಸಚಿವ ಸಿ.ಪಿ.ಯೋಗೀಶ್ವರ್, ಶಾಸಕರಾದ ಎಂ.ಕೃಷ್ಣಪ್ಪ, ಬಿ.ಎನ್.ವಿಜಯಕುಮಾರ್, ಕಂಠೀರವ ಸ್ಟುಡಿಯೋ ಅಧ್ಯಕ್ಷ ಎಂ.ರುದ್ರೇಶ್, ಪಾಲಿಕೆ ಸದಸ್ಯರಾದ ವೀಣಾ ನಾಗರಾಜು, ಜಿ.ಎಚ್.ರಾಮಚಂದ್ರ, ಆಂಜನಪ್ಪ, ಬಿ.ಜಿ.ಎಸ್. ಆಸ್ಪತ್ರೆಯ ಉಪಾಧ್ಯಕ್ಷ ಡಾ.ಎನ್.ವೆಂಕಟರಮಣ ಮತ್ತಿತರರು ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry