ಭಾನುವಾರ, ಮೇ 16, 2021
28 °C

ಶಿಕ್ಷಣ ಕ್ಷೇತ್ರದ ಶುದ್ಧೀಕರಣಕ್ಕೆ ಎಸ್‌ಎಫ್‌ಐ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಪ್ಪಳ: ಶಿಕ್ಷಣ ಕ್ಷೇತ್ರದ ಸುಧಾರಣೆ ಮತ್ತಿತರೆ ವಿಷಯಗಳಿಗೆ ಸಂಬಂಧಿಸಿದಂತೆ ಗುರುವಾರ ಎಸ್‌ಎಫ್‌ಐ ಜಿಲ್ಲಾ ಸಮಿತಿ ಸದಸ್ಯರು ಮತ್ತು ಕಾರ್ಯಕರ್ತರು ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿ ಬಳಿ ಧರಣಿ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಮಿತಿ ಜಿಲ್ಲಾ ಅಧ್ಯಕ್ಷ ಗುರುರಾಜ ದೇಸಾಯಿ, ಹಿಂದೆ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಬಿಜೆಪಿ ಸರ್ಕಾರ ಶಿಕ್ಷಣ ಕ್ಷೇತ್ರವನ್ನು ವ್ಯಾಪಾರೀಕರಣ, ಖಾಸಗೀಕರಣದ ಜೊತೆಗೆ ಕೇಸರಿಕರಣಮಯ ಮಾಡಿ ಶಿಕ್ಷಣ ಕ್ಷೇತ್ರವನ್ನು ಅಧೋಗತಿಗೆ ತಳ್ಳಿತ್ತು. ಹೊಸದಾಗಿ ಅಧಿಕಾರಕ್ಕೆ ಬಂದಿರುವ ರಾಜ್ಯ ಸರ್ಕಾರ ಹಿಂದಿನ ತಪ್ಪು ನೀತಿಗಳನ್ನು ಬದಲಾಯಿಸಿ ವಿದ್ಯಾರ್ಥಿಗಳ ಮತ್ತು ಶಿಕ್ಷಕರ ಪರವಾದ ನೀತಿಗಳನ್ನು ಜಾರಿಗೊಳಿಸುವ ಮೂಲಕ ಶುದ್ಧೀಕರಿಸುವಂತೆ ಒತ್ತಾಯಿಸಿದರು.ನಂತರ ಸಂವಿಧಾನಬದ್ಧ ಮಕ್ಕಳ ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಗೆ ಎಲ್ಲ ರೀತಿಯ ಮೂಲಸೌಕರ್ಯಗಳನ್ನು ಒದಗಿಸಬೇಕು. ಸರ್ವರಿಗೂ ಶಿಕ್ಷಣ ಎನ್ನುವ ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಖಾಸಗಿ ಶಿಕ್ಷಣ ಸಂಸ್ಥೆಗಳನ್ನು ನಿಯಂತ್ರಿಸಿ ಡೊನೇಷನ್ ಹಾವಳಿ ತಪ್ಪಿಸಬೇಕು.

ಅಲ್ಲದೇ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಶಿಕ್ಷಣ ನಿಯಂತ್ರಣ ಪ್ರಾಧಿಕಾರ ರಚಿಸುವಂತಿದ್ದರೂ ಜಿಲ್ಲೆಯಲ್ಲಿ ಅದು ಅಸ್ತಿತ್ವದಲ್ಲಿಲ್ಲ. ಖಾಲಿ ಹುದ್ದೆಗಳ ಭರ್ತಿ ಮತ್ತಿತರೆ ಬೇಡಿಕೆಗಳಿದ್ದ ಮನವಿಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಬಸವರಾಜ ಸ್ವಾಮಿ ಅವರಿಗೆ ಸಲ್ಲಿಸಲಾಯಿತು.

ಸಮಿತಿ ಉಪಾಧ್ಯಕ್ಷ ಅಮರೇಶ ಕಡಗದ, ಬಾಳಪ್ಪ ಹುಲಿಹೈದರ, ಪರಶುರಾಮ ರಾಠೋಡ, ಸುಬಾನ್ ಸಯ್ಯದ್ ಇತರರು ನೇತೃತ್ವ ವಹಿಸಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.