ಸೋಮವಾರಪೇಟೆ: ‘ಶಿಕ್ಷಣ ಕ್ಷೇತ್ರ ಉನ್ನತೀಕರಣಗೊಂಡಂತೆ ಮೌಲ್ಯಗಳು ಕಡಿಮೆಯಾಗುತ್ತಿವೆ. ಇಂಥದರಲ್ಲಿ ಉತ್ತಮ ಸಮಾಜ ಕಟ್ಟಲು ಮಕ್ಕಳನ್ನು ರೂಪಿಸುವ ಜವಾಬ್ದಾರಿ ಶಿಕ್ಷಣ ಸಂಸ್ಥೆಗಳ ಮೇಲಿದೆ’ ಎಂದು ರಾಜ್ಯ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ಹೇಳಿದರು.

ಪಟ್ಟಣದಲ್ಲಿ ಸೋಮವಾರ ತಾಲ್ಲೂಕು ಒಕ್ಕಲಿಗರ ಸಂಘದ ಆಶ್ರಯದಲ್ಲಿ ನಡೆದ ವಿಶ್ವಮಾನವ ಕುವೆಂಪು ವಿದ್ಯಾಸಂಸ್ಥೆಯ ಪದವಿಪೂರ್ವ ಕಾಲೇಜಿನ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

‘ರಾಜ್ಯ ಸರ್ಕಾರ ಆಡಳಿತಕ್ಕೆ ಬಂದ ಕೆಲವೇ ದಿನಗಳಲ್ಲಿ ಶಿಕ್ಷಣ ಇಲಾಖೆಯಲ್ಲಿ ಆಮುಲಾಗ್ರ ಬದಲಾವಣೆಗಳಾಗಿವೆ. ಶಾಲೆಗಳಲ್ಲಿ 12 ಸಾವಿರ ಶಿಕ್ಷಕರನ್ನು ತಾತ್ಕಾಲಿಕ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗಿದೆ. ಶೈಕ್ಷಣಿಕ ವರ್ಷದ ಮಧ್ಯಭಾಗದಲ್ಲಿ ಶಿಕ್ಷಕರು ನಿವೃತ್ತಿಯಾದಲ್ಲಿ ಮಕ್ಕಳ ಶಿಕ್ಷಣಕ್ಕೆ ತೊಂದರೆಯಾಗುತ್ತದೆ.

ಆದ್ದರಿಂದ ಪ್ರಾರಂಭದ ಜೂನ್ 1ನೇ ತಾರೀಖಿನಿಂದ ಮಾರ್ಚ್ 31ರ ಒಳಗೆ ನಿವೃತ್ತರಾಗುವ ಶಿಕ್ಷಕರನ್ನು ಗುರುತಿಸಿ, ಅವರನ್ನು ಶೈಕ್ಷಣಿಕ ವರ್ಷ ಪೂರ್ಣಗೊಳ್ಳುವವರೆಗೆ ಸೇವೆಯಲ್ಲಿ ಮುಂದುವರೆಯುವಂತೆ ಮಾಡುವ ಉದ್ದೇಶದಿಂದ ಹೆಚ್ಚುವರಿ ವೇತನ ನೀಡಲು ಸರ್ಕಾ ಯೋಜನೆ ರೂಪಿಸಿದೆ’ ಎಂದರು.

‘ಮುಂದಿನ ವರ್ಷದಿಂದ ಒಂದನೇ ತರಗತಿಯಿಂದಲೇ ಇಂಗ್ಲಿಷ್ ಪಠ್ಯ ಅಳವಡಿಸಲಾಗುವುದು. ಜೂನ್ ಮೊದಲ ವಾರದಿಂದಲೇ ವಿದ್ಯಾರ್ಥಿಗಳಿಗೆ ಸೈಕಲ್ ಹಾಗೂ ಸಮವಸ್ತ್ರ ವಿತರಣೆಗೆ ಕ್ರಮಕೈಗೊಳ್ಳಲಾಗಿದೆ. ಮೂಲಸೌಕರ್ಯಕ್ಕೆ ₨ 6 ಸಾವಿರ ಕೋಟಿ ಅನುದಾನ ಬೇಕಾಗುತ್ತದೆ ಎಂದರು.

ಶಾಸಕರಾದ ಕೆ.ಜಿ. ಬೋಪಯ್ಯ, ಎ. ಮಂಜು, ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಜಿ. ಮೇದಪ್ಪ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಜಿ.ಬಿ. ಸೋಮಯ್ಯ, ಬೆಂಗಳೂರು ಪಶ್ಚಿಮ ಡೆವಲಪರ್ಸ್ ನಿದರ್ೇಶಕ ಎ. ಪ್ರಸಾದ್, ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ರವಿ ಕುಶಾಲಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.