ಶುಕ್ರವಾರ, ಜೂನ್ 18, 2021
20 °C

ಶಿಕ್ಷಣ ಸಬಲೀಕರಣಕ್ಕೆ ಪಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವೈಟ್‌ಫೀಲ್ಡ್‌: ರೆಡ್ಡಿ ಜನಾಂಗವು ಶಿಕ್ಷಣ ಮತ್ತು ಆರೋಗ್ಯ ಸಬಲೀಕರಣಕ್ಕಾಗಿ ಪಣತೊಡಬೇಕಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.ಕರ್ನಾಟಕ ರೆಡ್ಡಿ ಜನ ಸಂಘ ಕಸವನಹಳ್ಳಿ ಗ್ರಾಮದಲ್ಲಿ ಏರ್ಪಡಿಸಿದ್ದ ಕಾರ್ಯ­ಕ್ರಮ­ದಲ್ಲಿ ಆಸ್ಪತ್ರೆ, ವೈದ್ಯಕೀಯ ಕಾಲೇಜು ಮತ್ತು ವಿದ್ಯಾರ್ಥಿಗಳ ವಸತಿ ಸಮು­ಚ್ಛಯ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.ಶೈಕ್ಷಣಿಕವಾಗಿ ಅಭಿವೃದ್ಧಿಯಾದರೆ ಮಾತ್ರ ಸಾಮಾಜಿಕ ಮನ್ನಣೆ ಗಳಿಸಲು ಸಾಧ್ಯ ಎಂದು ಹೇಳಿದರು.ಸಚಿವ ಎಚ್‌.ಕೆ.ಪಾಟೀಲ, ಕ್ರಿಯಾಶೀಲ ಹಾಗೂ ರಚನಾತ್ಮಕ ಕಾರ್ಯಗಳಿಂದ ಜನಾಂಗ ಮುಂದುವರಿಯಬಹುದು ಎಂದು ತಿಳಿಸಿದರು. ಶಾಸಕ ಅರವಿಂದ ಲಿಂಬಾವಳಿ ಮಾತನಾಡಿ ,ರೆಡ್ಡಿ ಜನಾಂಗದ ಆಸ್ಪತ್ರೆ ನಿರ್ಮಾಣಕ್ಕೆ ಪ್ರಸಕ್ತ ಸಾಲಿನ ಶಾಸಕ ನಿಧಿಯಿಂದ ₨50 ಲಕ್ಷ  ಮಂಜೂರು ಮಾಡಲಾಗುವುದು ಎಂದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.