ಶುಕ್ರವಾರ, ಮೇ 27, 2022
31 °C

ಶಿಕ್ಷೆ ರದ್ದತಿ ಕೋರಿ ಹೈಕೋರ್ಟ್‌ಗೆ ಸಂಪಂಗಿ ಅರ್ಜಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಲಂಚ ಪಡೆದು ಲೋಕಾಯುಕ್ತ ವಿಶೇಷ ನ್ಯಾಯಾಲಯದ ಆದೇಶದ ಮೇರೆಗೆ ಜೈಲು ಶಿಕ್ಷೆ ಅನುಭವಿಸುತ್ತಿರುವ ಕೆಜಿಎಫ್ ಶಾಸಕ ವೈ.ಸಂಪಂಗಿ, ಶಿಕ್ಷೆಯ ರದ್ದತಿಗೆ ಕೋರಿ ಸೋಮವಾರ ಹೈಕೋರ್ಟ್ ಮೊರೆ ಹೋಗಿದ್ದಾರೆ.ನಿವೇಶನ ವಿವಾದ ಇತ್ಯರ್ಥಪಡಿಸಲು ಉದ್ಯಮಿ  ಹುಸೇನ್ ಮೊಯಿನ್ ಫಾರೂಕ್ ಅವರಿಂದ ಐದು ಲಕ್ಷ ರೂಪಾಯಿ ಲಂಚ ಪಡೆದಿರುವ ವಿವಾದ ಇದಾಗಿದೆ. ಇವರಿಗೆ ಮೂರೂವರೆ ವರ್ಷ ಜೈಲು ಶಿಕ್ಷೆ ಹಾಗೂ 90 ಸಾವಿರ ರೂಪಾಯಿಗಳ ದಂಡ ವಿಧಿಸಿ ವಿಶೇಷ ನ್ಯಾಯಾಲಯ ಕಳೆದ ಶನಿವಾರ ಆದೇಶಿಸಿದೆ.ಈ ಆದೇಶ ರದ್ದತಿಗೆ ಹೈಕೋರ್ಟ ಅನ್ನು ಕೋರಿರುವ ಸಂಪಂಗಿ, ವಿಚಾರಣೆ ಮುಗಿಯುವವರೆಗೆ ತಮಗೆ ಜಾಮೀನು ನೀಡಬೇಕು ಎಂದೂ ಮನವಿ ಸಲ್ಲಿಸಿದ್ದಾರೆ.ವಿಶೇಷ ನ್ಯಾಯಾಧೀಶರು ಕೇವಲ ಊಹೆಯ ಆಧಾರದ ಮೇಲೆ ತಮ್ಮ ವಿರುದ್ಧ ಆದೇಶ ಹೊರಡಿಸಿದ್ದಾರೆ. ತಾವು ಯಾವುದೇ ರೀತಿಯ ತಪ್ಪು ಎಸಗಿಲ್ಲ ಎನ್ನುವುದು ಸಂಪಂಗಿ ಆರೋಪ. ಈ ಅರ್ಜಿಯು ಮಂಗಳವಾರ ವಿಚಾರಣೆಗೆ ಬರುವ ಸಾಧ್ಯತೆ ಇದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.