ಶನಿವಾರ, ಏಪ್ರಿಲ್ 17, 2021
32 °C

ಶಿಗ್ಗಾವಿ ಏತ ನೀರಾವರಿ ಲೋಕಾರ್ಪಣೆ ನಾಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿಗ್ಗಾವಿ ಏತ ನೀರಾವರಿ ಲೋಕಾರ್ಪಣೆ ನಾಳೆ

ಹಾವೇರಿ: ಜಿಲ್ಲೆಯ ಶಿಗ್ಗಾಂವ ಏತ ನೀರಾವರಿ ಯೋಜನೆ ಉದ್ಘಾಟನೆ  ಇದೇ 9 ರಂದು ಬೆಳಿಗ್ಗೆ 10 ಗಂಟೆಗೆ ಸವಣೂರ ತಾಲ್ಲೂಕಿನ ಹಲಸೂರ ಗ್ರಾಮದಲ್ಲಿ ನಡೆಯಲಿದ್ದು, ಸಾರ್ವಜನಿಕ ಸಮಾರಂಭ ಬೆಳಿಗ್ಗೆ 11 ಗಂಟೆಗೆ ಬಂಕಾಪುರದಲ್ಲಿ ನಡೆಯಲಿದೆ.ಜಾಕ್‌ವೆಲ್ ಹಾಗೂ ಪಂಪ್‌ಸೆಟ್‌ಅನ್ನು ಮುಖ್ಯಮಂತ್ರಿ ಜಗದೀಶ ಶೆಟ್ಟರ್, ತುಂತುರು ನೀರಾವರಿಯನ್ನು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ, 110/33 ಕೆವಿ ವಿದ್ಯುತ್ ಉಪ ಕೇಂದ್ರ ಮತ್ತು 33 ಕೆವಿ ವಿದ್ಯುತ್ ಪ್ರಸರಣಾ ಮಾರ್ಗವನ್ನು ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ  ಉದ್ಘಾಟಿಸಲಿದ್ದಾರೆ.ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಂ. ಉದಾಸಿ,  ಬ್ಯಾರೇಜ್ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸುವರು. ರಾಜ್ಯ ಜಲ ಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ  ಕೃಷಿ ಸಚಿವ ಉಮೇಶ ಕತ್ತಿ, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ನಿರಾಣಿ, ವಸತಿ ಸಚಿವ ವಿ. ಸೋಮಣ್ಣ, ಅಬಕಾರಿ ಸಚಿವ ಎಂ. ಪಿ. ರೇಣುಕಾಚಾರ್ಯ ಹಾಗೂ ಸಣ್ಣ ಕೈಗಾರಿಕೆ ಸಚಿವ ರಾಜುಗೌಡ, ಅತಿಥಿಗಳಾಗಿ ಸಂಸದರಾದ ಶಿವಕುಮಾರ ಉದಾಸಿ, ಪ್ರಹ್ಲಾದ್ ಜೋಶಿ, ಜಿ.ಪಂ. ಅಧ್ಯಕ್ಷ ಶಂಕ್ರಪ್ಪ ಮಾತನವರ, ಬೆಳಗಾವಿ ಕಾಡಾ ಅಧ್ಯಕ್ಷ ಸೋಮಣ್ಣ ಬೇವಿನಮರದ, ಜಿಲ್ಲೆಯ ಶಾಸಕರು, ವಿಧಾನ ಪರಿಷತ್ ಸದಸ್ಯರು ಸೇರಿದಂತೆ ಅನೇಕ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.ಮುಖ್ಯಮಂತ್ರಿ ಪ್ರವಾಸ

 ರಾಜ್ಯದ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಇದೇ 9 ರಂದು ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದು, ಅಂದು ಬೆಳಿಗ್ಗೆ 8.30ಕ್ಕೆ ಬೆಂಗಳೂರಿನ ಜಕ್ಕೂರು ಏರೋ ಡ್ರೋಂನಿಂದ ಹೆಲಿಕಾಪ್ಟರ್ ಮೂಲಕ ಹೊರಟು, 10.15ಕ್ಕೆ ಶಿಗ್ಗಾಂವ ಹೆಲಿಪ್ಯಾಡ್‌ಗೆ ಆಗಮಿಸಲಿದ್ದಾರೆ.ನಂತರ 10.30ಕ್ಕೆ  ಸವಣೂರ ತಾಲ್ಲೂಕು ಹಲಸೂರ ಗ್ರಾಮಕ್ಕೆ ಆಗಮಿಸಿ, ಶಿಗ್ಗಾಂವ ಏತ ನೀರವಾರಿ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ. 11 ಗಂಟೆಗೆ ಬಂಕಾಪುರಕ್ಕೆ ತೆರಳಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುವರು. ನಂತರ ಮಧ್ಯಾಹ್ನ 2 ಗಂಟೆಗೆ ಶಿಗ್ಗಾಂವ ಹೆಲಿಪ್ಯಾಡ್‌ನಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿದ್ದಾರೆ.ವಸತಿ ಸಚಿವರ ಪ್ರವಾಸ

ವಸತಿ ಸಚಿವ ವಿ.ಸೋಮಣ್ಣ ಇದೇ 9 ರಂದು ಬೆಳಿಗ್ಗೆ 11 ಗಂಟೆಗೆ  ಬಂಕಾಪುರದಲ್ಲಿ ಶಿಗ್ಗಾವಿ ಏತ ನೀರಾವರಿ ಯೋಜನೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳ್ಳುವರು. ನಂತರ ಶಿಗ್ಗಾವಿ, ಬಂಕಾಪುರ, ಸವಣೂರ ಪುರಸಭೆಗಳ ವ್ಯಾಪ್ತಿಯಲ್ಲಿನ ಫಲಾನುಭವಿಗಳಿಗೆ 224 ಗುಂಪು ಮನೆಗಳನ್ನು ನಿರ್ಮಿಸುವ ಕಾಮಗಾರಿಯ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸಿ, ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.