ಶುಕ್ರವಾರ, ಮೇ 7, 2021
26 °C

ಶಿಡ್ಲಘಟ್ಟ: ಡಿಪಿಎಪಿ, ಜಲಸಿರಿಯಲ್ಲಿ ಅಕ್ರಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿಡ್ಲಘಟ್ಟ: ತಾಲ್ಲೂಕಿಗೆ ಅತ್ಯಂತ ಅವಶ್ಯಕವಿರುವ ಅಂತರ್ಜಲ ಅಭಿವೃದ್ಧಿಗಾಗಿ ಸರ್ಕಾರ ನೀಡುತ್ತಿರುವ ಅನುದಾನ ಪೋಲಾಗುವುದನ್ನು ತಡೆಯಲು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ, ಕಾರ್ಯನಿರ್ವಾಹಣಾಧಿಕಾರಿ ಅಗತ್ಯ ಕ್ರಮ ತೆಗೆದುಕೊಳ್ಳಬೇಕು. ಅಭಿವೃದ್ಧಿ ಕಾಮಗಾರಿ ಸ್ಥಳಗಳಿಗೆ ಖುದ್ದು ಭೇಟಿ ನೀಡಿ, ಪರಿಶೀಲಿಸಿ ವರದಿ ನೀಡಬೇಕು ಎಂದು ಶಾಸಕ ವಿ.ಮುನಿಯಪ್ಪ ಸೂಚಿಸಿದರು.ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ, `ಡಿಪಿಎಪಿ ಯೋಜನೆಯಡಿ ರೂ. 50ಲಕ್ಷ, ಜಲಸಿರಿ ಯೋಜನೆಯಡಿ ರೂ. 4 ಲಕ್ಷ ಖರ್ಚಾಗಿದೆ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ.

ಆದರೆ ಕಾಮಗಾರಿ ಸಮರ್ಪಕವಾಗಿ ನಡೆಯದೆ ಅವ್ಯವಹಾರ ನಡೆದಿರುವುದು ಬೆಳಕಿಗೆ ಬಂದಿದೆ. ಇದರ ಹಿನ್ನೆಲೆಯಲ್ಲಿ ತಾ.ಪಂ. ಅಧ್ಯಕ್ಷ, ಕಾರ್ಯನಿರ್ವಹಣಾಧಿಕಾರಿ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು~ ಎಂದರು.ಕೆರೆ ಅಂಗಳವನ್ನು ಸರ್ವೆ ಮಾಡಿ ಅದಕ್ಕೆ ಸೇರುವ ಪ್ರದೇಶವನ್ನು ಸಂಪೂರ್ಣವಾಗಿ ಗುರುತಿಸಿ ಹದ್ದುಬಸ್ತು ನಿಗದಿಪಡಿಸುವ ಕಾರ್ಯ ಆಗಬೇಕಿದೆ. ಗೌಡನಕೆರೆಯಲ್ಲಿರುವ ಜಾಲಿ ಮರಗಳನ್ನು ತೆಗೆಸಲು ಅರಣ್ಯ ಇಲಾಖೆಗೆ ಕಳೆದ ಸಭೆಯಲ್ಲಿ ಸೂಚಿಸಿ ದ್ದರೂ ನಿರ್ಲಕ್ಷ್ಯ ತೋರಲಾಗಿದೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು. ನಿರಂತರ ಜ್ಯೋತಿ ಕಾಮಗಾರಿ ವಿಳಂಬ ಮಾಡುತ್ತಿರುವ ಗುತ್ತಿಗೆದಾರರಿಗೂ ನೋಟಿಸ್ ನೀಡುವಂತೆ ಸೂಚಿಸಿದರು.`ಸರ್ಕಾರಿ ಪ್ರೌಢಶಾಲೆ ಮಕ್ಕಳ ಉಪಯೋಗಕ್ಕಾಗಿ ದಾನಿಗಳು ನೀಡಿರುವ ವೈಜ್ಞಾನಿಕ ಉಪಕರಣಗಳು ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ. ಬಡವರೂ ಸಹ ಸರ್ಕಾರದ ಸವಲತ್ತುಗಳನ್ನು ನಿರಾಕರಿಸಿ ಮಕ್ಕಳನ್ನು ಖಾಸಗಿ ಇಂಗ್ಲಿಷ್ ಶಾಲೆಗಳಿಗೆ ಸೇರಿಸುತ್ತಿದ್ದಾರೆ~ ಎಂದು ಅವರು ಬೇಸರ ವ್ಯಕ್ತಪಡಿಸಿದರು.ಆರೋಗ್ಯಾಧಿಕಾರಿ ಡಾ.ವಿಜಯಾ ಮಾತನಾಡಿ, `ಪಟ್ಟಣದ ಸರ್ಕಾರಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸಾ ವಾಹನಗಳ ಸಮಸ್ಯೆಯಿದೆ. ಹೆರಿಗೆ ಕೊಠಡಿ ಸೋರುತ್ತಿದೆ. ರಕ್ತ ಶೇಖರಣಾ ಕೋಣೆಯ ಅಗತ್ಯವಿದೆ. ನೀರಿನ ಸಮಸ್ಯೆ ಯಿದೆ. ರೋಗಿಗಳಿಗೆ ಸ್ಥಳದ ಅಭಾವ ವಿದೆ~ ಎಂದರು.ಪಶುಗಳಿಗೆ ಚಿಕಿತ್ಸೆ ನೀಡಲು ಔಷಧಿ, ಕಿರಿಯ ಪಶುವೈದ್ಯಕೀಯ ಚಿಕಿತ್ಸಕರ ಕೊರತೆಯಿದೆ ಎಂದು ಪಶುವೈದ್ಯಾಧಿಕಾರಿ ಹೇಳಿದರು. `ಅಂತರ್ಜಲ ವೃದ್ಧಿಯಾಗಿಲ್ಲ. ಫ್ಲೋರೈಡ್, ನೈಟ್ರೇಟ್ ಅಂಶ ನೀರಿನಲ್ಲಿ ಪತ್ತೆಯಾಗುತ್ತಿದೆ ಎಂದು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ತಿಳಿಸಿದರು.ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ವೇಣುಗೋಪಾಲ್, ಕಾರ್ಯ ನಿರ್ವಾಹಣಾಧಿಕಾರಿ ನಾಗಪ್ಪ, ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.