ಕುಶಾಲನಗರ: ಸಮೀಪದ ಶಿರಂಗಾಲ ಗ್ರಾಮದ ಸರ್ಕಾರಿ ಪದವಿಪೂರ್ವ ಕಾಲೇಜು ಆವರಣದಲ್ಲಿ ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ ಯೋಜನೆಯಡಿಯಲ್ಲಿ ₹ 46 ಲಕ್ಷ ವೆಚ್ಚದಲ್ಲಿ ನಿರ್ಮಿಸಿರುವ ಪ್ರೌಢಶಾಲಾ ವಿಭಾಗದ ನೂತನ ಕಟ್ಟಡವನ್ನು ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಮಂಗಳವಾರ ಉದ್ಘಾಟಿಸಿದರು.

ಕಾಲೇಜು ಆವರಣದಲ್ಲಿ ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪಡೆಯುವ ಮೂಲಕ ಸಮಾಜದಲ್ಲಿ ಉತ್ತಮ ಸ್ಥಾನ ಗಳಿಸಿ ಪೋಷಕರಿಗೆ ಹಾಗೂ ಗುರುಹಿರಿಯರಿಗೆ ಗೌರವ ತರಬೇಕು ಎಂದು ಹೇಳಿದರು.

ಜಿ.ಪಂ. ಸದಸ್ಯ ಎಚ್.ಆರ್. ಶ್ರೀನಿವಾಸ್ ಮಾತನಾಡಿ, ಶಿರಂಗಾಲ ಕಾಲೇಜಿನಲ್ಲಿ ಪ್ರತಿ ವರ್ಷ ಉತ್ತಮ ಫಲಿತಾಂಶ ತರುವಲ್ಲಿ ಶ್ರಮಿಸುತ್ತಿರುವ ಶಿಕ್ಷಕರು ಪಾತ್ರ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾಲೇಜಿನ ಪ್ರಾಂಶುಪಾಲ ಸುರೇಶ್ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ. ಸದಸ್ಯ ಎನ್.ಎಸ್. ಜಯಣ್ಣ, ಗ್ರಾ.ಪಂ. ಅಧ್ಯಕ್ಷ ರಘು, ಉಪಾಧ್ಯಕ್ಷೆ ಶೃತಿ, ಮಾಜಿ ಅಧ್ಯಕ್ಷ ಎಸ್.ಯು.ನಂಜುಂಡಪ್ಪ, ಮಂಟಿಗಮ್ಮ ದೇವಾಲಯ ಸಮಿತಿ ಅಧ್ಯಕ್ಷ ಎಸ್.ಎಸ್. ಚಂದ್ರಶೇಖರ್, ಕಾರ್ಯದರ್ಶಿ ಸಿ.ಎನ್.ಲೋಕೇಶ್, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ತಮ್ಮಯ್ಯ, ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲೇಸ್ವಾಮಿ, ಅಕ್ಷರ ದಾಸೋಹ ಅಧಿಕಾರಿ ಹೇಮಂತ್ ಕುಮಾರ್, ಗ್ರಾ.ಪಂ. ಸದಸ್ಯ ರಮೇಶ್, ಪಿಡಿಒ ಎಚ್.ಡಿ.ಹರೀಶ್, ಎಲ್ಐಸಿ ಕುಶಾಲನಗರ ಶಾಖಾ ವ್ಯವಸ್ಥಾಪಕ ಆರ್.ಕೆ.ಹೆಗಡೆ, ಪಿಡಿಒ ಯೋಗೇಶ್ ಕುಮಾರ್ ಇದ್ದರು.

ಇದೇ ಸಂದರ್ಭದಲ್ಲಿ ಎಲ್ಐಸಿ ವತಿಯಿಂದ ನಿರ್ಮಿಸಿಕೊಡಲಾದ ಎರಡು ಶೌಚಾಲಯಗಳನ್ನು ಉದ್ಘಾಟಿಸ ಲಾಯಿತು. ಹಿರಿಯ ಶಿಕ್ಷಕ ಸೋಮಯ್ಯ ಕಾರ್ಯಕ್ರಮ ನಿರೂಪಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.