ಬುಧವಾರ, ಮೇ 25, 2022
22 °C

ಶಿರಾಳಕೊಪ್ಪ-ಹಾನಗಲ್ ರೈಲು ಮಾರ್ಗಕ್ಕೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಾಳಕೊಪ್ಪ:  ಶಿವಮೊಗ್ಗ- ಶಿಕಾರಿಪುರ- ರಾಣೇಬೆನ್ನೂರು ಬದಲು ಶಿರಾಳಕೊಪ್ಪ ಮಾರ್ಗವಾಗಿ ಹಾನಗಲ್‌ಗೆ ತಲುಪುವಂತೆ ಕೇಂದ್ರ ರೈಲ್ವೆ ಇಲಾಖೆ ಸಮೀಕ್ಷೆ ಮಾಡಬೇಕು ಎಂದು ಕೇಂದ್ರ ರೈಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮನವಿ ಮಾಡಿರುವುದಾಗಿ  ಸಂಸತ್ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.ಹತ್ತಿರದ ತಡಗಣಿ ಗ್ರಾಮದಲ್ಲಿ ಈಚೆಗೆ ನಡೆದ 24ಲಕ್ಷ ವೆಚ್ಚದ ಕುಡಿಯುವ  ನೀರಿನ ಕೊಳವೆ ಬಾವಿ, ಪೈಪ್‌ಲೈನ್, ರೂ.1ಲಕ್ಷ ಲೀಟರ್ ಸಾಮರ್ಥ್ಯದ ನೀರಿನ ಟ್ಯಾಂಕ್ ಹಾಗೂ ಸುವರ್ಣ ಗ್ರಾಮ ಯೋಜನೆಯ  ರಸ್ತೆ ಕಾಮಗಾರಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ತಡಗಣಿಯ ಮುಖ್ಯರಸ್ತೆಯನ್ನು ಸಂಸದರ ಅನುದಾನದಲ್ಲಿ ನಿರ್ಮಾಣ ಮಾಡಬೇಕು ಎಂದು ಜಿಲ್ಲಾ ಪಂಚಾಯ್ತಿ ಸದಸ್ಯ ದಾನಿರುದ್ರಪ್ಪ ಸಂಸದ ಬಿ.ವೈ.ರಾಘವೇಂದ್ರ ಮನವಿ ಮಾಡಿದರು.ಗ್ರಾಮ ಪಂಚಾಯ್ತಿ ಅಧ್ಯಕ್ಷ ಕೆ.ಮಂಜುನಾಥ ಮಾತನಾಡಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಗ್ರಾಮ ಪಂಚಾಯ್ತಿಗೆ ಸಾಕಷ್ಟು ಅನುದಾನ ನೀಡಿದ್ದು, ಜಿಲ್ಲಾ ಪಂಚಾಯ್ತಿ ಸದಸ್ಯ ದಾನಿರುದ್ರಪ್ಪ  ಪಕ್ಷಭೇದ ಮರೆತು ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕಾಮಗಾರಿ ಮಾಡಿ ಇತರ ರಾಜಕಾರಣಿಗಳಿಗೆ ಮಾದರಿ ಆಗಿದ್ದಾರೆ ಎಂದು ಶ್ಲಾಘಿಸಿದರು.ತಾಲ್ಲೂಕು ಪಂಚಾಯ್ತಿ ಇಒ ಚಂದ್ರಶೇಖರ್, ಎಂಜಿನಿಯರ್ ವಿಜಯಕುಮಾರ್, ಸಬ್‌ಇನ್‌ಸ್ಪೆಕ್ಟರ್ ಗುರುಪ್ರಸಾದ, ಉಪಾಧ್ಯಕ್ಷೆ ರೇಣುಕಮ್ಮ, ಸದಸ್ಯರಾದ ಸತೀಶ್‌ಗೌಡ್ರು, ರವಿ ಶಾನುಭಾಗ, ಹಾಲೇಶಪ್ಪ, ದ್ಯಾವಪ್ಪ, ಮುರುಗೇಶಪ್ಪ, ಅಂಗನವಾಡಿ ಶಿಕ್ಷಕಿ ನಾಗರತ್ನ, ಭಾರತಿ  ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.