ಶನಿವಾರ, ಮಾರ್ಚ್ 6, 2021
28 °C

ಶಿರಾ ಬಳಿ ಅಪಘಾತ: ನಾಲ್ವರ ದುರ್ಮರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿರಾ ಬಳಿ ಅಪಘಾತ: ನಾಲ್ವರ ದುರ್ಮರಣ

ಶಿರಾ: ರಾಷ್ಟ್ರೀಯ ಹೆದ್ದಾರಿ–4ರಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಐವರ ಮೇಲೆ ಕಾರ್ ಹರಿದು ನಾಲ್ವರು ಮೃತಪಟ್ಟಿರುವ ಘಟನೆ ಗುರುವಾರ ಮಧ್ಯಾಹ್ನ ಕಳ್ಳಂಬೆಳ್ಳ ಸಮೀಪದ ದೊಡ್ಡ ಆಲದ ಮರ ಬಳಿ ನಡೆದಿದೆ.ನಾಲ್ವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ​ಮೃತರಲ್ಲಿ ಮೂವರು ಮಹಿಳೆಯರು, ಒಬ್ಬ ವಿದ್ಯಾರ್ಥಿ ಸೇರಿದ್ದಾರೆ. ಒಬ್ಬರ ಸ್ಥಿತಿ ಚಿಂತಾಜನಕವಾಗಿದೆ.

ದೊಡ್ಡ ಆಲದಮರದ ಬಳಿ ಬಸ್‌ಗಾಗಿ ಕಾಯುತ್ತಿದ್ದ ವೇಳೆ ಬೆಂಗಳೂರು ಮಾರ್ಗವಾಗಿ ಬಂದ ಟವೇರಾ ಕಾರು ಪ್ರಯಾಣಿಕರ ಮೇಲೆ ಹರಿದು ಅಪಘಾತ ಸಂಭವಿಸಿತು.

ಘಟನೆ ಕುರಿತು ಕಳ್ಳಂಬೆಳ್ಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.