ಶಿಳ್ಳೆಗಾರರ ರಕ್ಷಣಾ ಮಸೂದೆ ಮಂಡನೆ

ಸೋಮವಾರ, ಮೇ 20, 2019
30 °C

ಶಿಳ್ಳೆಗಾರರ ರಕ್ಷಣಾ ಮಸೂದೆ ಮಂಡನೆ

Published:
Updated:

ನವದೆಹಲಿ (ಪಿಟಿಐ): ಭ್ರಷ್ಟಾಚಾರ ಅಥವಾ ಸರ್ಕಾರಿ ನೌಕರರು ಮತ್ತು ಸಚಿವರು ಉದ್ದೇಶಪೂರ್ವಕವಾಗಿ ಅಧಿಕಾರ ದುರುಪಯೋಗ ಪಡಿಸಿಕೊಂಡಿರುವ ಬಗ್ಗೆ ಮಾಹಿತಿ ಬಹಿರಂಗಪಡಿಸುವವರಿಗೆ ರಕ್ಷಣೆ ನೀಡುವ ಕುರಿತ `ಶಿಳ್ಳೆಗಾರರ ರಕ್ಷಣಾ ಮಸೂದೆ-2011~ ಯನ್ನು ರಾಜ್ಯಸಭೆಯಲ್ಲಿ ಮಂಗಳವಾರ ಮಂಡಿಸಲಾಗಿದೆ.ಲೋಕಸಭೆ ಈಗಾಗಲೇ ಅಂಗೀಕಾರವಾಗಿರುವ ಈ ಮಸೂದೆಯನ್ನು ಕೆಲವು ಸಣ್ಣಪುಟ್ಟ ತಿದ್ದುಪಡಿಗಳನ್ನು ಸೂಚಿಸಿ ಪ್ರಧಾನ ಮಂತ್ರಿಗಳ ಕಾರ್ಯಾಲಯದ ಸಚಿವ ವಿ. ನಾರಾಯಣಸ್ವಾಮಿ ಅವರು ರಾಜ್ಯಸಭೆಯಲ್ಲಿ ಮಂಡಿಸಿದರು.ರಾಷ್ಟ್ರೀಯ ಭದ್ರತೆ, ಸಾರ್ವಭೌಮತ್ವ ಮತ್ತು ದೇಶದ ಏಕತೆಗೆ ಸಂಬಂಧಿಸಿದ ವಿಷಯಗಳನ್ನು ಈ ಮಸೂದೆ ವ್ಯಾಪ್ತಿಯಿಂದ ಹೊರಗಿಡುವ ತಿದ್ದುಪಡಿಯನ್ನು ಇದು ಒಳಗೊಂಡಿದೆ.ರಕ್ಷಣಾ ಪಡೆ ಮತ್ತು ಬೇಹುಗಾರಿಕೆ ವಿಭಾಗದಲ್ಲಿನ ಭ್ರಷ್ಟಾಚಾರ ಮತ್ತು ಮಾನವ ಹಕ್ಕುಗಳ ಉಲ್ಲಂಘನೆಯನ್ನೂ ಈ ಮಸೂದೆ ಒಳಗೊಂಡಿದೆ ಎಂದು ಅವರು ಹೇಳಿದರು.

 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry