ಶುಕ್ರವಾರ, ಜೂನ್ 25, 2021
29 °C

ಶಿವನಗೌಡ ಪರ ಪ್ರಚಾರ: ನರಸಿಂಹ ನಾಯಕ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಯಾದಗಿರಿ: ರಾಯಚೂರು ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶಿವನಗೌಡ ನಾಯಕ ಮತ್ತು ನನ್ನ ಮಧ್ಯೆ ಯಾವುದೇ ಭಿನ್ನಮತವಿಲ್ಲ. ಶಿವನಗೌಡ ನಾಯಕ ಪರ ಶೀಘ್ರ ಪ್ರಚಾರ ಆರಂಭಿಸುವುದಾಗಿ ಮಾಜಿ ಸಚಿವ ನರಸಿಂಹ ನಾಯಕ (ರಾಜುಗೌಡ) ಸ್ಪಷ್ಟಪಡಿಸಿದರು.ನಗರದಲ್ಲಿ ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಲೋಕಸಭೆ ಟಿಕೆಟ್‌ ಆಕಾಂಕ್ಷಿಯಲ್ಲ. ನಾನು ಲೋಕಸಭೆಗೆ ಸ್ಪರ್ಧಿಸುವ ಬಗ್ಗೆ ವಿಚಾರ ಮಾಡಿಲ್ಲ. ಸ್ಪರ್ಧಿಸುವಂತೆ ವರಿಷ್ಠರು ಹೇಳಿದ್ದರು. ಆದರೆ ರಾಜ್ಯ ರಾಜಕಾರಣಕ್ಕೆ ಹೆಚ್ಚಿನ ಒತ್ತು ನೀಡುತ್ತಿದ್ದು, ಈ ಹಿನ್ನೆಲೆಯಲ್ಲಿ ಶಿವನಗೌಡರಿಗೆ ಟಿಕೆಟ್‌ ನೀಡುವಂತೆ ನಾನೇ ಸೂಚಿಸಿದ್ದೇನೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾ­ಯವಿಲ್ಲ. ಈ ಕುರಿತು ಕೇಳಿ ಬರುತ್ತಿರುವ ಊಹಾಪೋಹ­ಗಳಿಗೆ ಯಾವುದೇ ಅರ್ಥವಿಲ್ಲ ಎಂದರು.ಶಿವನಗೌಡ ನನ್ನ ಆತ್ಮಿಯ ಸ್ನೇಹಿತ. ಅವರನ್ನು ಬೆಂಬಲಿ­ಸು­ವುದಷ್ಟೇ ಅಲ್ಲ, ಅವರ ಗೆಲುವಿಗೆ ಶ್ರಮಿಸುತ್ತೇನೆ. ಶೀಘ್ರವೇ ಕ್ಷೇತ್ರದಾದ್ಯಂತ ಪ್ರಚಾರ ಕಾರ್ಯ ಆರಂಭಿಸುತ್ತೇನೆ ಎಂದು ತಿಳಿಸಿದರು.ನಾನು ದೆಹಲಿಗೆ ಹೋಗಿದ್ದು ನಿಜ. ಆದರೆ ಅಲ್ಲಿ ವರಿಷ್ಠರನ್ನು ಭೇಟಿಯಾಗಿದ್ದು ನನಗಾಗಿ ಅಲ್ಲ. ನನ್ನ ಕೆಲವು ಆತ್ಮೀಯ ಸ್ನೇಹಿತ­ರಿಗಾಗಿ ದೆಹಲಿಗೆ ಹೋಗಿದ್ದೆ. ವರಿಷ್ಠ ಎದುರು ಯಾವುದೇ ಬೇಡಿಕೆ ಇಟ್ಟಿಲ್ಲ. ನನಗೆ ಲೋಕಸಭೆಗೆ ಹೋಗು­ವುದು ಇಷ್ಟವಿಲ್ಲ. ರಾಜ್ಯ­ದಲ್ಲಿಯೇ ಇದ್ದು, ನನ್ನ ಕ್ಷೇತ್ರದ ಅಭಿ­ವೃದ್ಧಿಗೆ ಸ್ಪಂದಿಸುತ್ತೇನೆ ಎಂದು ಹೇಳಿದರು.ನಾರಾಯಣಪುರ ಎಡದಂಡೆ ಕಾಲುವೆಗೆ ಮಾರ್ಚ್‌ ಅಂತ್ಯದವರೆಗೆ ನೀರು ಹರಿಸಲೇ ಬೇಕು. ಸಾಕಷ್ಟು ಹಣ ಖರ್ಚು ಮಾಡಿ ಬಿತ್ತನೆ ಮಾಡಿರುವ ರೈತರಿಗೆ ತೊಂದರೆ ಆಗಲಿದೆ. ಈ ಹಿನ್ನೆಲೆಯಲ್ಲಿ ಕಾಲುವೆಗೆ ನೀರು ಸ್ಥಗಿತಗೊಳಿಸುವುದು ಸರಿಯಲ್ಲ ಎಂದರು.ಕಾಲುವೆ ನವೀಕರಣ ಕಾಮಗಾರಿ ಪಡೆದಿರುವ ಗುತ್ತಿಗೆದಾರರ ತಾಳಕ್ಕೆ ತಕ್ಕಂತೆ ಸರ್ಕಾರ ವರ್ತಿಸುತ್ತಿದೆ. ಕೂಡಲೇ ಮುಖ್ಯಮಂತ್ರಿಗಳು, ಜಲಸಂಪನ್ಮೂಲ ಸಚಿವರು ಮಾರ್ಚ್‌ ಅಂತ್ಯದವರೆಗೆ ಕಾಲುವೆಗೆ ನೀರು ಹರಿಸಲು ಕ್ರಮ ಕೈಗೊಳ್ಳಬೇಕು. ಇಲ್ಲದೇ ಇದ್ದಲ್ಲಿ, ರೈತರಿಗೆ ಆಗುವ ಹಾನಿಯನ್ನು ಸರ್ಕಾರವೇ ಭರಿಸಿಕೊಡಬೇಕಾಗುತ್ತದೆ ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಎಚ್.ಸಿ. ಪಾಟೀಲ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.