ಮಂಗಳವಾರ, ಜನವರಿ 28, 2020
19 °C

ಶಿವಪುತ್ರಗೆ ಅಂಬೇಡ್ಕರ್ ರಾಷ್ಟ್ರೀಯ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮುದ್ದೇಬಿಹಾಳ: ಭಾರತದ ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನರಾಮ್ ಅವರಿಂದ ಸಂಸ್ಥಾ ಪಿತ ಭಾರತಿಯ ದಲಿತ ಅಕಾಡೆಮಿ ವತಿಯಿಂದ ಕೊಡುವ ಬಾಬಾಸಾಹೇಬ ಡಾ. ಅಂಬೇಡ್ಕರ್ ರಾಷ್ಟ್ರೀಯ ಫೆಲೋಶಿಪ್ ಪ್ರಶಸ್ತಿ-2013ನ್ನು  ತಾಲ್ಲೂಕು ದಲಿತ ಸಾಹಿತ್ಯ ಪರಿಷತ್‌ ಅಧ್ಯಕ್ಷ  ಶಿವಪುತ್ರ ಗು. ಅಜಮನಿ ಅವರಿಗೆ ಕೊಡಲಾಗಿದೆ.  ಡಿಸೆಂಬರ್ 12 ಮತ್ತು 13 ರಂದು ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುವ ರಾಷ್ಟ್ರೀಯ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಅಕಾ ಡೆಮಿಯ ರಾಷ್ಟ್ರೀಯ ಅಧ್ಯಕ್ಷ ಡಾ. ಎಸ್.ಪಿ ಸುಮನಾಕ್ಷರ ತಿಳಿಸಿದ್ದಾರೆ.ಅಜಮನಿ ಅವರಿಗೆ ಈಗಾಗಲೇ ಬುದ್ದಿಷ್ಟ ಸೊಸೈಟಿ ಕೊಡುವ ರಾಷ್ಟ್ರ ಮಟ್ಟದ ಅಂಬೇಡ್ಕರ್ ರತ್ನ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ದೊರೆತಿವೆ. ಅಬುದಾಬಿ ಹಾಗೂ ಸಿಂಗಾಪುರದಲ್ಲಿ ನಡೆದ ವಿಶ್ವ ಕನ್ನಡ ಸಂಸ್ಕೃತಿ ಸಮ್ಮೇಳನ ಭಾಗವಹಿಸಿದ್ದರು.

ಪ್ರಶಸ್ತಿ ಪುರಸ್ಕೃತ ಅಜಮನಿ ಅವರನ್ನು ಜಿಲ್ಲೆಯ ವಿವಿಧ ಸಂಘಟನೆಗಳ ಪದಾಧಿಕಾರಿಗಳು ಅಭಿನಂದಿಸಿದ್ದಾರೆ.  

ಪ್ರತಿಕ್ರಿಯಿಸಿ (+)