ಶನಿವಾರ, ಮೇ 15, 2021
22 °C

ಶಿವಲಿಂಗಯ್ಯ ಅವರಿಗೆ ಅತ್ಯುತ್ತಮ ವಿಜ್ಞಾನಿ ಪ್ರಶಸ್ತಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ತುಮಕೂರು ಜಿಲ್ಲೆಯ ಕೃಷಿ ವಿಜ್ಞಾನ ಕೇಂದ್ರದ ಕಾರ್ಯಕ್ರಮ ಸಂಯೋಜಕ ಡಾ.ವೈ.ಎನ್.ಶಿವಲಿಂಗಯ್ಯ ಅವರಿಗೆ ಕೃಷಿ ವಿಶ್ವವಿದ್ಯಾಲಯ ಹಳೆಯ ವಿದ್ಯಾರ್ಥಿಗಳ ಸಂಘದ ವತಿಯಿಂದ 2009-10ನೇ ಸಾಲಿನ `ಡಾ.ಆರ್.ದ್ವಾರಕೀನಾಥ್ ಅತ್ಯುತ್ತಮ ವಿಸ್ತರಣಾ ವಿಜ್ಞಾನಿ~ ಮತ್ತು `ದಿ.ಗಿರಿಯಪ್ಪಗೌಡ ಸ್ಮರಣಾರ್ಥ ಅತ್ಯುತ್ತಮ ವಿಸ್ತರಣಾ ವಿಜ್ಞಾನಿ ಪ್ರಶಸ್ತಿ~ಗಳನ್ನು ನೀಡಿ ಗೌರವಿಸಲಾಗಿದೆ.ಜಿಲ್ಲೆಯ ಪ್ರಮುಖ ಬೆಳೆಗಳಾದ ರಾಗಿ, ಭತ್ತ, ತೊಗರಿಯಲ್ಲಿನ ಹೊಸತಳಿಗಳ ಪರಿಚಯ, ತೃಣ ಧಾನ್ಯಗಳ ಪರಿಚಯ, ವೃತ್ತಿ ತರಬೇತಿ ಮೂಲಕ ರೈತರಿಗೆ ಮಾಹಿತಿ ನೀಡುವುದು, ಮಳೆ ನೀರು ಪ್ರಾತ್ಯಕ್ಷಿಕೆ, ತೋಟಗಾರಿಕೆ, ಎರೆಹುಳು ಗೊಬ್ಬರ ತಯಾರಿಕಾ ಘಟಕ, ತೋಟಗಾರಿಕಾ ನರ್ಸರಿ, ಬೆಳೆಗಳ ರೋಗ ಚಿಕಿತ್ಸಾಲಯ ಸ್ಥಾಪನೆ, ಪ್ರಮುಖ ಬೆಳೆಗಳ ಬೀಜೋತ್ಪಾದನೆ, ರೈತ ಉಪಯೋಗಿ ವೈಜ್ಞಾನಿಕ ಲೇಖನಗಳಿಗಾಗಿ ಪ್ರಶಸ್ತಿ ನೀಡಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.