ಶಿವಶಂಕರ ರೆಡ್ಡಿ: ವಿಧಾನಸಭೆ ಉಪಾಧ್ಯಕ್ಷ

7

ಶಿವಶಂಕರ ರೆಡ್ಡಿ: ವಿಧಾನಸಭೆ ಉಪಾಧ್ಯಕ್ಷ

Published:
Updated:
ಶಿವಶಂಕರ ರೆಡ್ಡಿ: ವಿಧಾನಸಭೆ ಉಪಾಧ್ಯಕ್ಷ

ಬೆಂಗಳೂರು: ವಿಧಾನಸಭೆಯ ಉಪಾಧ್ಯಕ್ಷರಾಗಿ ಗೌರಿಬಿದನೂರು ಕಾಂಗ್ರೆಸ್ ಶಾಸಕ ಎನ್.ಎಚ್.ಶಿವಶಂಕರ ರೆಡ್ಡಿ ಅವರು ಆಯ್ಕೆಯಾಗುವುದು ಖಚಿತವಾಗಿದೆ. ಈ ಸ್ಥಾನಕ್ಕೆ ಬುಧವಾರ ಅವರೊಬ್ಬರೇ ನಾಮಪತ್ರ ಸಲ್ಲಿಸಿದ್ದಾರೆ.ವಿಧಾನಸಭೆಯಲ್ಲಿ ಬೆಳಿಗ್ಗೆ ನಡೆದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯ ಬಳಿಕ ಶಿವಶಂಕರ ರೆಡ್ಡಿ ಅವರು ವಿಧಾನಸಭೆಯ ಕಾರ್ಯದರ್ಶಿ ಪಿ.ಓಂಪ್ರಕಾಶ ಅವರಿಗೆ ನಾಮಪತ್ರ ಸಲ್ಲಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಸಚಿವರಾದ ಟಿ.ಬಿ.ಜಯಚಂದ್ರ, ದಿನೇಶ್ ಗುಂಡೂರಾವ್, ಶಾಸಕರಾದ ಕೆ.ಆರ್.ರಮೇಶ್‌ಕುಮಾರ್, ಸಿ.ಎಸ್.ನಾಡಗೌಡ ಮತ್ತಿತರರು ಜೊತೆಗಿದ್ದರು.ರೆಡ್ಡಿ ಅವರು ಗೌರಿಬಿದನೂರು ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ವಿಧಾನಸಭೆಯಲ್ಲಿ ಗುರುವಾರ ಪ್ರಶ್ನೋತ್ತರ ಕಲಾಪದ ಬಳಿಕ ಚುನಾವಣೆ ನಡೆಯಲಿದೆ. ನಂತರ ರೆಡ್ಡಿ ಅವರ ಆಯ್ಕೆಯನ್ನು ಅಧಿಕೃತವಾಗಿ ಘೋಷಿಸಲಾಗುತ್ತದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry