ಶುಕ್ರವಾರ, ಮೇ 7, 2021
21 °C

ಶಿವಾಜಿ ಜಯಂತಿ ರಾಷ್ಟ್ರೀಯ ಉತ್ಸವವಾಗಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ವಿಜಾಪುರ: ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯನ್ನು ರಾಷ್ಟ್ರೀಯ ಉತ್ಸವವನ್ನಾಗಿ ಕೇಂದ್ರ ಸರ್ಕಾರ ಘೋಷಿಸಬೇಕು ಎಂದು ನಾಗಠಾಣ ಕ್ಷೇತ್ರದ ಶಾಸಕ ವಿಠ್ಠಲ ಕಟಕಧೋಂಡ ಹೇಳಿದರು.ಜಿಲ್ಲಾ ಆಡಳಿತದಿಂದ ಇಲ್ಲಿಯ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.ಮಾತೃಭಕ್ತಿ, ದೇಶಪ್ರೇಮಕ್ಕೆ ಶಿವಾಜಿ ಮಹಾರಾಜರು ಆದರ್ಶರಾಗಿದ್ದಾರೆ. ಅಪ್ಪಟ ದೇಶಪ್ರೇಮಿಯಾದ ಶಿವಾಜಿ ಹಿಂದೂ ಧರ್ಮದ ಪುನರುತ್ಥಾನಕ್ಕೆ ಶ್ರಮಿಸಿದರು ಎಂದರು.ಅಧ್ಯಕ್ಷತೆ ವಹಿಸಿದ್ದ ನಗರ ಶಾಸಕ ಅಪ್ಪಾಸಾಹೇಬ ಪಟ್ಟಣಶೆಟ್ಟಿ ಮಾತನಾಡಿ, ಶಿವಾಜಿ ಎಂದೂ ಕೋಮುವಾದಿ ಆಗಿರಲಿಲ್ಲ. ಮುಸ್ಲಿಮರೂ ಸೇರಿದಂತೆ ವಿವಿಧ ಧರ್ಮದ ಜನರು ಅವರ ಸೈನ್ಯದಲ್ಲಿದ್ದರು. ಅವರ ಸರ್ವಧರ್ಮ ಚಿಂತನೆ, ತಾಯಿ ಜೀಜಾಬಾಯಿ ಅವರ ಮಾತೃಪ್ರೇಮ ಹಾಗೂ ಹಿಂದೂ ಧರ್ಮದ ಬಗ್ಗೆ ಇದ್ದ ಒಲವನ್ನು ಇಂದಿನ ಯುವಕರಿಗೆ ತಿಳಿಸುವ ಅಗತ್ಯವಿದೆ ಎಂದರು.ವಿಶೇಷವಾಗಿ ಬೆಳಗಾವಿ, ವಿಜಾಪುರ, ರಾಯಚೂರು ಭಾಗದಲ್ಲಿ ಶಿವಾಜಿ ಅವರು ಆಡಳಿತ ನಡೆಸಿದ್ದಾರೆ. ಅವರ ಆದರ್ಶ ಚಿಂತನೆಗಳನ್ನು ಸ್ಮರಿಸುವ ನಿಟ್ಟಿನಲ್ಲಿ ಸರ್ಕಾರ ಶಿವಾಜಿ ಜಯಂತಿ ಆಚರಣೆ ಆರಂಭಿಸಿದೆ. ಸರ್ಕಾರದಿಂದ ಜಿಲ್ಲಾ ಕೇಂದ್ರದಲ್ಲಿ ಶಿವಾಜಿ ಭವನ ನಿರ್ಮಿಸಲಾಗುವುದು ಎಂದು ಹೇಳಿದರು.ಜಿಲ್ಲಾಧಿಕಾರಿ ಶಿವಯೋಗಿ ಕಳಸದ ಮಾತನಾಡಿದರು. ಮಹಿಳಾ ವಿವಿ ಪತ್ರಿಕೋದ್ಯಮ ವಿಭಾಗದ ಮುಖ್ಯಸ್ಥ ಡಾ.ಓಂಕಾರ ಕಾಕಡೆ ಉಪನ್ಯಾಸ ನೀಡಿದರು.ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಭೀಮಾಶಂಕರ ಹದನೂರ, ಜಿ.ಪಂ. ಸಿಇಒ ಎ.ಎನ್. ಪಾಟೀಲ, ಎಸ್ಪಿ ಡಾ.ಡಿ.ಸಿ. ರಾಜಪ್ಪ, ಆನಂದ ಧುಮಾಳೆ, ಸುರೇಶ ಜಾಧವ, ರಾಜಾರಾಮ ಗಾಯಕವಾಡ  ಹಾಜರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸೋಮಶೇಖರ ವಾಲಿ ಸ್ವಾಗತಿಸಿದರು. ವಕೀಲ ತುಳಸೀರಾಮ ಸೂರ್ಯವಂಶಿ ವಂದಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.